24 ಗಂಟೆಯಲ್ಲೇ ಭಾರತ-ಆಸೀಸ್ ಟಿ-20 ಪಂದ್ಯದ ಟಿಕೆಟ್ ಸೋಲ್ಡ್’ಔಟ್

Promotion

ಬೆಂಗಳೂರು, ನವೆಂಬರ್ 21, 2020 (www.justkannada.in): ಭಾರತ ಹಾಗೂ ಆಸ್ಟ್ರೇಲಿಯಾ ಮೂರು ಪಂದ್ಯಗಳ ಟಿ-20 ಸರಣಿಯ ಟಿಕೆಟ್ 24 ಗಂಟೆಯ ಒಳಗೆ ಸಂಪೂರ್ಣವಾಗಿ ಮಾರಾಟವಾಗಿದೆ.

ನವೆಂಬರ್ 27ಕ್ಕೆ ಇಂಡೋ-ಆಸೀಸ್ ಸರಣಿಗೆ ಚಾಲನೆ ಸಿಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಸಿಡ್ನಿ ಕ್ರಿಕೆಟ್ ಮೈದಾನ (ಎಸ್‌ಸಿಜಿ) ಹಾಗೂ ಮನುಕಾ ಓವಲ್‌ನಲ್ಲಿ ನಡೆಯಲಿರುವ ಎರಡನೇ ಹಾಗೂ ಮೂರನೇ ಏಕದಿನ ಪಂದ್ಯದ ಟಿಕೆಟ್‌ಗಳೆಲ್ಲವೂ ಸೋಲ್ಡ್ ಔಟ್ ಆಗಿವೆ.

ನವೆಂಬರ್ 27 ರಂದು ಎಸ್‌ಸಿಜಿಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದ ಕೆಲವೇ ಟಿಕೆಟ್‌ಗಳಷ್ಟೆ ಬಾಕಿ ಇವೆ. ಇದುಕೂಡ ಶೀಘ್ರದಲ್ಲೇ ಸಂಪೂರ್ಣವಾಗಿ ಮಾರಾಟವಾಗುವ ನಿರೀಕ್ಷೆಯಿದೆ.