ಬಿಜೆಪಿಯಿಂದ ಟಿಕೆಟ್ ಸಿಗದ ಕೆಲ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ-  ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ..

Promotion

ಬೆಳಗಾವಿ, ಅ,14,2019(www.justkannada.in): ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.  ರಾಜಕೀಯದ ಆಗು ಹೋಗುಗಳನ್ನ ನೋಡಿಕೊಂಡು ಪಕ್ಷಕ್ಕೆ ಕರೆದುಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾಧ್ಯಮದವರ ಜತೆ ಮಾತನಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ,  ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್‌ ಸೇರ್ಪಡೆಯಾಗಲು ಈಗಾಗಲೇ ಸಿದ್ಧತೆ ನಡೆಸಿದ್ದು, ಪಕ್ಷದ ಹೈಕಮಾಂಡ್‌ಅನ್ನು ಭೇಟಿ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಮುಂದೆ ಬಂದಿದ್ದಾರೆ.  ಕೆಲವರು ನಮ್ಮ ಹೈಕಮಾಂಡ್ ಜತೆ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಅದಷ್ಟು ಬೇಗ ಅಭ್ಯರ್ಥಿಗಳನ್ನ ಘೋಷಿಸುವಂತೆ ಹೇಳಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಬರುವವರನ್ನು ಅಯಾಕ್ಷೇತ್ರದ ಬೆಳವಣಿಗೆ ನೋಡಿಕೊಂಡು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚಿಂತನೆ ಮಾಡುತ್ತೇವೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದವರಿಗೆ ಹೈಕಮಾಂಡ್ ಟಿಕೆಟ್ ನೀಡಬಹುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಗೋಕಾಕ್ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ,   ಈಗಾಗಲೇ ಪ್ರಚಾರವನ್ನ ಆರಂಭಿಸಲಾಗಿದೆ.  ಒಂದೆಡೆ ಜನರು ಕಣ್ಣೀರು ಹಾಕುತ್ತಿದ್ದರೇ ಮತ್ತೊಂದೆಡೆ ಕ್ಷೇತ್ರದಲ್ಲಿ ಲೂಟಿ ಹೊಡೆಯುವ ಕೆಲಸವಾಗುತ್ತಿದೆ ಎಂದು ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ದ ಹರಿಹಾಯ್ದರು.

Key words: Some – BJP leaders – join- Congress-former Minister -Satish Zarakihili