ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ದರೇ ವಿಷಾದ ವ್ಯಕ್ತಪಡಿಸುತ್ತೇನೆ- ಸಚಿವ ಸುಧಾಕರ್…..

kannada t-shirts

ಬೆಂಗಳೂರು,ಮಾರ್ಚ್,24,2021(www.justkannada.in):  ಎಲ್ಲರೂ ಸತ್ಯ ಹರಿಶ್ಚಂದ್ರರೇ..? ಏಕಪತ್ನಿ ವ್ರತಸ್ಥರೇ..? ರಾಜ್ಯದ ಎಲ್ಲಾ 224 ಶಾಸಕರ ಬಗ್ಗೆ ತನಿಖೆಯಾಗಲಿ. ಅವರ ಬಂಡವಾಳ ಬಯಲಾಗುತ್ತದೆ ಎಂದು ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇದೀಗ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ತಮ್ಮ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕುರಿತು ವಿಷಾದ ವ್ಯಕ್ತಪಡಿಸಿರುವ ಸಚಿವ  ಸುಧಾಕರ್, ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ 17 ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ  ಹೇಳಿದ್ದಾರೆ.sorry-hurt - my statement-Minister- Sudhakar.

ಹಾಗೆಯೇ ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ. ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

english summary….

Minister K. Sudhakar apologizes on his statement
Bengaluru, Mar.24, 2021 (www.justkannada.in): “Reacting to the sleaze CD case and its investigation, Health Minister Dr. K. Sudhakar had challenged all the 224 MLAs to face an investigation to know the truth over whose character is good. However, following comments by many political bigwigs he has apologized for his statement.
“If my words have hurt anybody I will apologize. I just had reacted to the leaders who had targeted only 17 of us and questioned our character. I didn’t mean to hurt all the MLAs,” he said.sorry-hurt - my statement-Minister- Sudhakar.
“I have a lot of respect for all my colleagues and leaders. Hence, if my words have hurt anyone please forgive me,” he added.
Keywords: Minister Dr. K. Sudhakar/ apologize over his statement/ sleaze CD/ investigation/ reaction

Key words:  sorry-hurt – my statement-Minister- Sudhakar.

website developers in mysore