ರೈತರ ಬಗ್ಗೆ ಮೃದು ಮಾತನಾಡುತ್ತಲೇ ಬೆನ್ನಿಗೆ ಚೂರಿ -ಬಿಜೆಪಿ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…

ಬೆಂಗಳೂರು,ಏಪ್ರಿಲ್,11,2021(www.justkannada.in): ರಸಗೊಬ್ಬರ ದರ ಹೆಚ್ಚಳ ಮಾಡಿರುವ ಸರ್ಕಾರದ ವಿರುದ್ಧ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.Sanskrit Vivia,8th event,30 people,Ph.D,43graduates,M.Phil,Awarded 

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಬಿಜೆಪಿ ಸರ್ಕಾರ ಗೋಲಿಬಾರ್ ನಡೆಸಿತ್ತು. ಈಗ ರಸಗೊಬ್ಬರ ದರವನ್ನು ಶೇಕಡ 60 ರಷ್ಟು ಹೆಚ್ಚಳ ಮಾಡಿದೆ. ರೈತರ ಬಗ್ಗೆ ಮೃದು ಮಾತನಾಡುತ್ತಲೇ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು  ಕಿಡಿಕಾರಿದ್ದಾರೆ.

ಕೇಂದ್ರ ಸಚಿವ ಸದಾನಂದಗೌಡರು ರಸಗೊಬ್ಬರ ಕಂಪನಿ ಪ್ರತಿನಿಧಿಗಳ ಜೊತೆ  ಸಭೆ ನಡೆಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಧಾನಿಯವರೊಂದಿಗೆ ಮಾತನಾಡಿ ಅವರಿಗೆ ಮನವರಿಕೆ ಮಾಡಿಕೊಳ್ಳಬೇಕು. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಸದಾನಂದಗೌಡರು ಪ್ರಧಾನಿಯವರೊಂದಿಗೆ ಮಾತನಾಡಿ ರಸಗೊಬ್ಬರಕ್ಕೆ ನೀಡುತ್ತಿದ್ದ 1.5 ಲಕ್ಷ ಕೋಟಿ ರೂ. ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. Speak- softly –farmer- Knife-former cm-HD Kumaraswamy

ಹಾಗೆಯೇ ಬಾಯಿ ಮಾತಿನಿಂದ ರೈತರ ಬಾಳು ಬೆಳಗುವುದು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Key words: Speak- softly –farmer- Knife-former cm-HD Kumaraswamy