ಸಿಎಂ ಬಿಎಸ್ ವೈರಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…

ಮೈಸೂರು,ಮೇ,19,2021(www.justkannada.in):  ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮೇ 24ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಈ ನಡುವೆ ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.jk

ಈ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್,  ಸಹಕಾರ ಬ್ಯಾಂಕ್ ಗಳ ಸಾಲ ಮರುಪಾವತಿ ಅವಧಿ ವಿಸ್ತರಣೆ ಸ್ವಾಗತಾರ್ಹ. ಇಂದಿನ ಸಂಕಷ್ಟಕ್ಕೆ ಇದು ರೈತರಿಗೆ ಅಲ್ಪಮಟ್ಟದ ಸಹಾಯವಾಗಲಿದೆ. ಈ ಯೋಜನೆಯನ್ನ ಮತ್ತಷ್ಟು ವಿಸ್ತರಣೆ ಮಾಡಬೇಕು ಹಾಗೂ ಕೇಂದ್ರವೂ ಈ ನಿಟ್ಟಿನಲ್ಲಿ ಕ್ರಮವಹಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮರುಪಾವತಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಬೇಕು. ಬೆಳೆ ನಷ್ಟ ಪರಿಹಾರಕ್ಕೆ ಗರಿಷ್ಠ ಮಿತಿ ಕೈಬಿಟ್ಟು ಸಂಪೂರ್ಣ ಬೆಳೆಗೆ ಪರಿಹಾರ ನೀಡಿ ಎಂದು ಆಗ್ರಹಿಸಿದ್ದಾರೆ.special-package-announcement-cm-bs-yeddyurappa-farmer-leader-kuruburu-shanthakumar

ಹಾಗೆಯೇ ಅಸಂಘಟಿತ ಕಾರ್ಮಿಕರ ಪ್ಯಾಕೇಜ್ ನ್ನು ಮತ್ತಷ್ಟು ವಿಸ್ತರಣೆ ಮಾಡಿ. ಗ್ರಾಮೀಣ ಭಾಗದ ಜನರ ಬಳಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡ್ತಿವೆ‌. ಈ‌ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಎಂದು ಸರ್ಕಾರಕ್ಕೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಒತ್ತಾಯ ಮಾಡಿದ್ದಾರೆ.

Key words: Special package -announcement – CM BS Yeddyurappa-Farmer leader- Kuruburu Shanthakumar