ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ : ಸಿಎಂ ಬಸವರಾಜ ಬೊಮ್ಮಾಯಿ.

ಹುಬ್ಬಳ್ಳಿ ,‌ಅಕ್ಟೋಬರ್ 21,2021(www.justkannada.in):  ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ  ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ಹುಬ್ಬಳ್ಳಿ-ಧಾರವಾಡ  ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನ ದ‌ ಬಳಿ‌ ಆಯೋಜಿಸಿರುವ “ಪೋಲಿಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದ‌ ನಂತರ  ಮಾಧ್ಯಮದ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಹಿಳೆಯರ ಆತ್ಮರಕ್ಷಣೆಗಾಗಿ ತರಬೇತಿ  ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ಕೆಎಸ್ ಆರ್ ಪಿ ಪಡೆ ಹಾಗೂ ಪೋಲಿಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳ ಸೇವೆ ಹಾಗೂ ಅನುಭವವನ್ನು ಬಳಸಿಕೊಂಡು ಈ ತರಬೇತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ನಾಗರಿಕರ ಸುರಕ್ಷತೆಗಾಗಿ ಪೊಲೀಸರು ಮಾಡುವ ಸೇವೆ ತ್ಯಾಗವನ್ನು ಸ್ಮರಣೆ ಮಾಡಬೇಕು. ನಮ್ಮ ನಾಗರಿಕ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವಿದು. ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೇರಳ ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಆಗಿರುವ ಸಂಕಷ್ಟಕ್ಕೆ ರಾಜ್ಯದ ಜನತೆ ಹಾಗೂ ಕರ್ನಾಟಕ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ಸಹಕಾರವನ್ನು ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಉತ್ತರಾಖಂಡದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ:

ಉತ್ತರಾಖಂಡದಲ್ಲಿಯೂ ಉಂಟಾಗಿರುವ ಭೂಕುಸಿತ ಸಂಭವಿಸುತ್ತಿದೆ. ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಿಗೆ ನೆರವು ಒದಗಿಸಲು ಅಧಿಕಾರಿಗಳನ್ನು  ನಿಯೋಜಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Special- training – women’s -self defense-CM- Basavaraja Bommai.