ಮಳೆಗಾಗಿ ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ…

Promotion

ಮೈಸೂರು,ಜೂ,6,2019(www.justkannada.in):  ರಾಜ್ಯದಲ್ಲಿ ಬರಗಾಲ ಹಿನ್ನೆಲೆ  ಮಳೆಗಾಗಿ ರಾಜ್ಯದ ವಿವಿಧ ದೇವಾಲಯಗಳಲ್ಲಿ  ಸರ್ಕಾರ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಸರ್ಕಾರ ವಿಶೇಷ ಪೂಜೆ ಸಲ್ಲಿಕೆಗೆ ಆದೇಶಿಸಿದ್ದು,  ಈ ಹಿನ್ನಲೆ  ಮಳೆಗಾಗಿ ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಹಾಗೆಯೇ ಮೈಸೂರಿನ ಚಾಮುಂಡಿ ಬೆಟ್ಟ, ನಂಜನಗೂಡು ಸೇರಿದಂತೆ ಮೈಸೂರು ಜಿಲ್ಲೆಯಾದ್ಯಂತ ಇರುವ ಮುಜರಾಯಿ ದೇಗುಲಗಳಲ್ಲಿ ಪೂಜೆ ನೆರವೇರಿಸಲಾಗುತ್ತಿದೆ. ಪರ್ಜನ್ಯ ಜಪ, ಪಂಚಾಂಮೃತ ಅಭಿಷೇಕ  ಸಹ ನೆರವೇರಿಸಲಾಗಿದೆ. ಬ್ರಾಹ್ಮೀ ಮಹೂರ್ತದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

Key words: Special worship submission to various temples of Mysore for the rain.

#Specialworship #varioustemples #Mysore #rain.