ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ – ಸಚಿವ  ಡಾ. ನಾರಾಯಣಗೌಡ

ಮಂಡ್ಯ,ಫೆಬ್ರವರಿ,12,2021(www.justkannada.in): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ಡಾ. ನಾರಾಯಣಗೌಡ ಅವರು ಹೇಳಿದರು.jk

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ನೌಕರರ ಸಂಘ (ರಿ) ಜಿಲ್ಲಾ ಶಾಖೆ  ಸಂಯುಕ್ತಾಶ್ರಯದಲ್ಲಿ ನಗರದ ಸರ್. ಎಂ ವಿಶ್ವೇಶ್ವರಯ್ಯ  ಕ್ರೀಡಾಂಗಣದಲ್ಲಿ  ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕ್ರೀಡಾ ಇಲಾಖೆ ಮಂತ್ರಿ ಆಗಿರುವುದು ಸಂತೋಷ ತಂದಿದ್ದು, ಇಡೀ ರಾಷ್ಟ್ರದಲ್ಲಿ ನಡೆಯುವ ಒಲಂಪಿಕ್ ಕ್ರೀಡಾಂಗಣದ ಮಾದರಿಯಲ್ಲಿ  ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಒಂದು ಕ್ರೀಡಾಂಗಣ ನಿರ್ಮಾಣ ದೃಷ್ಟಿಯಿಂದ  1500ಕೋಟಿ ಹಣವನ್ನು ಕ್ರೀಡಾಕಾಂಪ್ಲೆಕ್ಸ್ ನಿರ್ಮಾಣಕ್ಕೆ ಘೋಷಣೆ ಮಾಡಿದ್ದೇವೆ. ಈಗಾಗಲೇ ಕೆ.ಆರ್ ಪೇಟೆಯಲ್ಲಿ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ 2 ಕೋಟಿ ಘೋಷಣೆ ಮಾಡಿದ್ದು, ಇದರ ಮೂಲಕ ಕ್ರೀಡಾಸಕ್ತರಿಗೆ ಉತ್ತೇಜನ ಸಿಗಲಿದೆ ಎಂದರು.

ಸರ್ಕಾರಿ ಅಧಿಕಾರಿಗಳಿಗೆ, ನೌಕರರಿಗೆ ಕ್ರೀಡಾಕೂಟ ಬಹಳ ಮುಖ್ಯ. ಸರ್ಕಾರಿ ನೌಕರರು ಕೆಲಸದ ಒತ್ತಡದ ನಿರ್ವಹಣೆಗಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಎಂದು ಹೇಳಿದರು.sports-very-important-mans-physical-mental-health-minister-narayana-gowda

ಜಿಲ್ಲಾಧಿಕಾರಿಗಳಾದ ಡಾ.ಎಂ‌.ವಿ ವೆಂಕಟೇಶ್ ರವರು ಮಾತನಾಡಿ, ಕ್ರೀಡೆ ಮನುಷ್ಯನಿಗೆ ಹೊಸ ಶಕ್ತಿ,ಸ್ಪೂರ್ತಿ, ಹೊಸ ಚೈತನ್ಯ, ಜೀವನೋತ್ಸವವನ್ನು ಕೊಡುತ್ತದೆ ಎಂದರು.

ಈ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ಕೆಲಸದ ಒತ್ತಡವನ್ನು ನಿವಾರಿಸಲು ಈ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯಕ ಎಂದರು. ಈ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹು ಮುಖ್ಯ ಎಂದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಸಿ.ಇ.ಒ ಜುಲ್ಪಿಕರ್ ಉಲ್ಲಾ, ಕ್ರೀಡಾಧಿಕಾರಿ ಅನಿತಾ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ ಅಧ್ಯಕ್ಷರಾದ ಶಂಭುಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಮಂಜು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words: Sports – very important – man’s- physical – mental health-Minister -Narayana Gowda.