ಭಾರತದಲ್ಲೂ ಶ್ರೀಲಂಕಾ ಪರಿಸ್ಥಿತಿ ಎದುರಾದರೂ ಆಶ್ಚರ್ಯವಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ ಆತಂಕ.

Promotion

ಬೆಂಗಳೂರು,ಆಗಸ್ಟ್,8,2022(www.justkannada.in):  ಭಾರತದಲ್ಲಿ ಆರ್ಥಿಕತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ.  ದೇಶದಲ್ಲೂ ಶ್ರೀಲಂಕಾದ ಪರಿಸ್ಥಿತಿ ಎದುರಾದರೂ ಆಶ್ಚರ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿದ್ಧರಾಮಯ್ಯ  ಹರ್ ಘರ್ ತಿರಂಗಾ ಅಭಿಯಾನದ ಮೂಲಕ ಬಿಜೆಪಿ ನಾಟಕ ಮಾಡುತ್ತಿದೆ. ರಾಷ್ಟ್ರ ಬಾವುಟಕ್ಕೆ ಬಿಜೆಪಿಯವರು ಗೌರವ ಕೊಟ್ಟವರಲ್ಲ. ಅವರು ರಾಷ್ಟ್ರಗೀತೆ ಮತ್ತು ರಾಷ್ಟ್ರ ಬಾವುಟ ವಿರೋಧಿಸುತ್ತಾರೆ ಎಂದರು.

ಇನ್ನು ಸಿದ್ಧರಾಮೋತ್ಸವ ಕಾರ್ಯಕ್ರಮ ಯಶಸ್ಸಿನಿಂದ ಬಿಜೆಪಿಗೆ ಭಯ ಶುರುವಾಗಿದೆ. ಈ ಭಯದಿಂದ ಇನ್ನೂ ಟೀಕೆಯನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದ ಸಿದಱಧರಾಮಯ್ಯ,  ಅಹಿಂದ ಮತಗಳನ್ನು ಮತ ಪಟ್ಟಿಯಿಂದ ತೆಗೆಯಲಾಗಿದೆ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಯಲ್ಲಿ ಸತ್ಯವಿರುತ್ತದೆ. ಅಲ್ಪ ಸಂಖ್ಯಾತರು, ಹಿಂದುಳಿದವರು ಹಾಗೂ ದಲಿತ ಮತಗಳು ಯಾವಾಗಲೂ ಕಾಂಗ್ರೆಸ್ ಪರ ಇರುತ್ತವೆ. ಆ ಕಾರಣಕ್ಕಾಗಿ ಆ ಮತಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕೆಲಸ ನಡೆದಿರಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

Key words: Sri Lanka – same- situation – India- Former CM-Siddaramaiah