ಲಂಕಾ-ಇಂಡೋ ಟಿ-20 ಕಾದಾಟ ಇಂದು

ಇಂದೋರ್, ಜನವರಿ 07, 2019 (www.justkannada.in): ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿಯ 2 ನೇ ಪಂದ್ಯ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ.

ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇಂದಿನ ಪಂದ್ಯ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಉಳಿದ 2 ಟಿ20 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಸರಣಿ ಕೈವಾಶ ಮಾಡಿಕೊಳ್ಳಲು ಟೀಂ ಇಂಡಿಯಾ ಭರ್ಜರಿ ಪ್ಲ್ಯಾನ್ ನಡೆಸಿದೆ.

ಇನ್ನು ಇಂದೋರ್ ನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇದ್ದು, ಮಳೆಯ ಸಾಧ್ಯತೆ ಇಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ-ಶ್ರೀಲಂಕಾ ನಡುವೆ ಬಿಗ್ ಫೈಟ್ ನಡೆಯಲಿದೆ.