ನಾಳೆ ಮೈಸೂರು ವಿವಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

Promotion

ಮೈಸೂರು,ಅಕ್ಟೋಬರ್,30,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಅಕ್ಟೋಬರ್ 31ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದೆ.jk-logo-justkannada-logo

ಅಂದು ಬೆಳಗ್ಗೆ 10.30ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರು ವಿವಿ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ಅವರು ಶ್ರೀ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶ ವಿಷಯ ಕುರಿತು ಉಪನ್ಯಾಸ ನೀಡುವರು ಎಂದು ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sri,Maharishi,Valmiki,Jayanti,Mysore VV,tomorrow

key words : Sri-Maharishi-Valmiki-Jayanti-Mysore VV-tomorrow