ಶ್ರೀರಾಮ ಮಂದಿರ ನಿರ್ಮಾಣ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿದ್ದೇವೆ: ಕೈಲಾದಷ್ಟು ಸಹಾಯ ಮಾಡಿ- ಸಚಿವ ಎಸ್.ಟಿ ಸೋಮಶೇಖರ್ ಮನವಿ…

Promotion

ಮೈಸೂರು,ಜನವರಿ,23,2021(www.justkannada.in): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡುವ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿದ್ದೇವೆ. ಎಲ್ಲರೂ ಅವರವರ ಕೈಲಾದಷ್ಟು ಸಹಾಯ ಮಾಡಿ ಎಂದು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿದರು.jk

ಶ್ರೀರಾಮ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಜಿಲ್ಲಾ ಉಸ್ತುಚಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು. ಖ್ಯಾತ ನ್ಯಾಯವಾದಿ ಹರೀಶ್ ಕುಮಾರ್ ಹೆಗಡೆಯವರು ಬೆಳ್ಳಿ ಇಟ್ಟಿಗೆಯನ್ನು ಉಸ್ತುವಾರಿ ಸಚಿವರ ಮುಖಾಂತರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಲ್. ನಾಗೇಂದ್ರ, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್, ಬಿಜೆಪಿ ನಗರಾಧ್ಯಕ್ಷರಾದ ಶ್ರೀವತ್ಸ, ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಿ.ಪಿ. ಮಂಜುನಾಥ್, ಬಿಜೆಪಿ ವಿಭಾಗ ಪ್ರಭಾರರಾದ ಮೈ.ವಿ.ರವಿಶಂಕರ್, ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್ ಕುಮಾರ್ ಹಾಗೂ ಶಶಿಧರ್ ಉಪಸ್ಥಿತರಿದ್ದರು.srirama-mandir-construction-campaign-mysore-minister-st-somashekhar

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಇಂದು ಮೈಸೂರು ಬಿಜೆಪಿ ನಗರಾಧ್ಯಕ್ಷರು, ಸಂಸದರು, ಶಾಸಕರು ಹಾಗೂ ಪದಾಧಿಕಾರಿಗಳು ಮನೆ ಮನೆಗೆ ಹೋಗಿ ದೇಣಿಗೆ ಸಂಗ್ರಹಿಸಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡುವ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿದ್ದೇವೆ. ಎಲ್ಲರೂ ಅವರವರ ಕೈಲಾದಷ್ಟು ಸಹಾಯ ಮಾಡಿ ಎಂದು ಮನವಿ ಮಾಡಿದರು.

Key words: Srirama Mandir –construction- campaign-mysore- Minister- ST Somashekhar