ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ: ಆತಂಕ ಬೇಡ-ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ…

ಉಡುಪಿ,ಜೂ,9,2020(www.justkannada.in): ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.sslc-exam-state-education-minister-suresh-kumar-clarified

ಕೊರೋನಾ ಹರಡುವ ಭೀತಿ ಹಿನ್ನೆಲೆ ಈಗಾಗಲೇ ತೆಲಂಗಾಣ, ತಮಿಳುನಾಡು ಹಾಗೆಯೇ ಪುದುಚೇರಿಯಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿತ್ತು.

ಈ ಕುರಿತು ಉಡುಪಿಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿಲ್ಲ. ಹೊರ ರಾಜ್ಯದಿಂದ ಬಂದವರಿಗೆ ಕೊರೋನಾ ಕಂಡು ಬಂದಿದೆ. ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಸ್ ಎಸ್ ಎಲ್ ಸಿ ಪರೀಕ್ಷೆ ನಿಗದಿಯಂತೆ ಜೂನ್ 25ರಿಂದ ನಡೆಯುತ್ತದೆ. ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳುವುದು ಬೇಡ. ಪರೀಕ್ಷೆಗೆ ಸಿದ್ಧರಾಗುವಂತೆ ಮನವಿ ಮಾಡಿದರು.

ಖಾಸಗಿ ಶಾಲೆಗಳಲ್ಲಿ ಅಡ್ಮಿಷನ್ ಮಾಡಿಕೊಳ್ಳಲು ಅವಕಾಶ ಇಲ್ಲ. ಆದೇಶ ಮೀರಿ ಅಡ್ಮಿಷನ್ ಮಾಡಿಕೊಂಡರೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್  ಎಚ್ಚರಿಕೆ ನೀಡಿದರು.

Key words:  SSLC Exam- State-Education Minister –Suresh kumar- clarified.