ಎಸ್ ಎಸ್ ಎಲ್ ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಎಸ್ ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್: ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಏನು..?

ಬೆಂಗಳೂರು,ಮಾ,5,2020(www.justkannada.in): ಎಸ್ ಎಸ್ ಎಲ್ ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಎಸ್ ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ರಾಜ್ಯ ಬಜೆಟ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಇಂದು 2020-21ನೇ ಸಾಲಿನ  ಬಜೆಟ್ ಮಂಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಎಸ್ ಎಸ್ ಎಲ್ ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಪ್ರಶಸ್ತಿ ನೀಡಲಾಗುವುದು, ಹಾಗೂ ಪ್ರತಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ನೀಡಲಾಗುವುದು. ಇದಕ್ಕಾಗಿಯೇ 60 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

 ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು…?

ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿ ಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

ಶಿಕ್ಷಣ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 25 ರಷ್ಟು ಸೀಟು ಹಂಚಿಕೆಗೆ ಕ್ರಮ. ಈ ವಸತಿ ಶಾಲೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ.

ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ.

ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ. ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, “ಸಂಭ್ರಮ ಶನಿವಾರ” ಆಚರಣೆ. “

ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ‘ಶಿಕ್ಷಕ ಮಿತ್ರ’ ಎಂಬ ಮೊಬೈಲ್ ಆಯಪ್ ಅಭಿವೃದ್ಧಿ.

400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.

ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ವಿಜ್ಞಾನ ಪ್ರತಿಭಾ ಶೋಧನೆ’ ಕಾರ್ಯಕ್ರಮ ಪ್ರಾರಂಭ. ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣ, ಒಂದು ಸಾವಿರ ರೂ. ಮಾಸಿಕ ಶಿಷ್ಯವೇತನ. ಗ್ರಾಮೀಣ ಯುವಕ/ಯುವತಿಯರಿಗೆ ಕೌಶಲ್ಯಾಭಿವೃದ್ಧಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ ವಸತಿ ತರಬೇತಿ ಕಾರ್ಯಕ್ರಮ.

Key words:  SSLC- first place – SC and ST -students –good news- budget- cm bs yeddyurappa