ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ.

ಬೆಂಗಳೂರು,ಆಗಸ್ಟ್,9,2021(www.justkannada.in): ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ  ಪ್ರಕಟವಾಗಿದ್ದು,99.9ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸುದ್ಧಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಶೇ. 99.9% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಬಾರಿ ಡಿಜಿಟಲ್ ಮೌಲ್ಯಮಾಪನ ಮಾಡಲಾಗಿದೆ ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದರು.

ಎಲ್ಲಾ ವಿದ್ಯಾರ್ಥಿಗಳು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ಫಲಿತಾಂಶವನ್ನ ಪಡೆಯುತ್ತಾರೆ.  ಇದಲ್ಲದೆ, ಕೆಎಸ್ ಇಇಬಿಯ ಅಧಿಕೃತ ವೆಬ್‌ಸೈಟ್ www.sslc.karnataka.gov.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೊರೋನಾದಿಂದಾಗಿ ಮೊದಲ ಬಾರಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳೊಂದಿಗೆ ಕೇವಲ ಎರಡು ದಿನಗಳ ಕಾಲ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಈ ವರ್ಷ A+ ಗ್ರೇಡ್ ಅನ್ನು 1,28,931 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಎ ಗ್ರೇಡ್ ಅನ್ನು 2,50,317 ವಿದ್ಯಾರ್ಥಿಗಳು ಪಡೆದಿದ್ದಾರೆ. ಬಿ ಗ್ರೇಡ್ ಅನ್ನು 2,87,684 ವಿದ್ಯಾರ್ಥಿಗಳು ಪಡೆದಿದ್ದಾರೆ. ಸಿ ಗ್ರೇಡ್ ಅನ್ನು 1,13,610 ವಿದ್ಯಾರ್ಥಿಗಳು ಆಗಿದ್ದಾರೆ. ಈ ಬಾರಿ 8,76,581 ವಿದ್ಯಾರ್ಥಿಗಳಲ್ಲಿ 4,72,643 ವಿದ್ಯಾರ್ಥಿಗಳು ಹಾಗೂ 4,01,282 ವಿದ್ಯಾರ್ಥಿನಿಯರು ಪಾಸ್ ಆಗಿರೋದಾಗಿ ತಿಳಿಸಿದರು.

Key words: SSLC -Results –Published-minister-BC nagesh