ಎಸ್.ಟಿ ಮೀಸಲಾತಿ ಹೆಚ್ಚಳ ವಿಚಾರ:  ಸರ್ವಪಕ್ಷ ಸಭೆ ಕರೆಯುವುದಾಗಿ ಸಿಎಂ ಬೊಮ್ಮಾಯಿ ಭರವಸೆ.

Promotion

ಬೆಂಗಳೂರು,ಸೆಪ್ಟಂಬರ್,23,2022(www.justkannada.in): ಎಸ್.ಟಿ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ಸರ್ವಪಕ್ಷ ಸಭೆ ಕರೆದು ಚರ್ಚಿಸುವುದಾಗಿ  ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಇಂದು ವಿಧಾನಸಭೆಯಲ್ಲಿ ಎಸ್ ಟಿ ಮೀಸಲಾತಿ ಹೆಚ್ಚಳ ವಿಚಾರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಕೆಲವೇ ದಿನಗಳಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸುತ್ತೇನೆ. ನಾಗಮೋಹನ್ ದಾಸ್ ಸುಭಾಷ್ ಆಡಿ ಸಮಿತಿ ವರದಿ ಬಂದಿದೆ. ಮೀಸಲಾತಿ ಹೆಚ್ಚಳ ಸೇರಿ ಸೌಲಭ್ಯ ಕಲ್ಪಸುವ ಯೋಜನೆ ಇದೆ.  ನಿಮ್ಮ ಬೇಡಿಕೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದರು.

Key words: ST- reservation -increase -CM Bommai- all-party- meeting.