ಶಾಲೆಗಳ ಆರಂಭ ವಿಚಾರ: ಶಿಕ್ಷಣ ಇಲಾಖೆ ವಿಡಿಯೋ ಕಾನ್ಫರೆನ್ಸ್ ಸಭೆ ನಾಳೆಗೆ ಮುಂದೂಡಿಕೆ…

ಬೆಂಗಳೂರು,ನವೆಂಬರ್,2,2020(www.justkannada.in):  ರಾಜ್ಯದಲ್ಲಿ ಶಾಲೆಗಳ ಆರಂಭ ವಿಚಾರ ಕುರಿತು ಚರ್ಚಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ಅವರು ಕರೆದಿದ್ದ ವಿಡಿಯೋ ಕಾನ್ಫರೆನ್ಸ್ ಸಭೆ ತಾಂತ್ರಿಕ ಸಮಸ್ಯೆಯಿಂದ ನಾಳೆಗೆ ಮುಂದೂಡಿಕೆಯಾಗಿದೆ.jk-logo-justkannada-logo

ಶಾಲೆಗಳ ಆರಂಭ ವಿಚಾರ, ಶಾಲೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಇಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ನೇತೃತ್ವದ ಎಲ್ಲಾ ಜಿಲ್ಲೆಗಳ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು.start-schools-education-department-video-conference-meeting-postpones-tomorrow

ಆದರೆ ಸರ್ವರ್ ಸಮಸ್ಯೆಯಿಂದ ಇಂದಿನ ಸಭೆ ರದ್ದಾಗಿದ್ದು ನಾಳೆಗೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದ್ದು ಸಭೆಯಲ್ಲಿ ಶಾಲೆಗಳ ಆರಂಭದಿಂದ ಆಗುವ ಸಾಧನ ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ.

Key words: Start –Schools-Education  Department -video conference meeting – postpones -tomorrow