ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭ..

ಬೆಂಗಳೂರು,ಸೆಪ್ಟಂಬರ್,21,2020(www.justkannada.in): ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು  ಕೋವಿಡ್‌–19 ಮುಂಜಾಗ್ರತಾ ಕ್ರಮ ಕೈಗೊಂಡು ಮುಂಗಾರು ಅಧಿವೇಶನ ನಡೆಸಲು ಸರ್ಕಾರ ಸಜ್ಜಾಗಿದೆ.jk-logo-justkannada-logo

ಸದನಕ್ಕೆ ಹಾಜರಾಗುವ ಎಲ್ಲಾ ಶಾಸಕರೂ ಕೊರೋನಾ ಟೆಸ್ಟ್ ಕಡ್ಡಾಯವಾಗಿ ಮಾಡಿಸಿ ವರದಿ ತರುವಂತೆ ಸೂಚನೆ ನೀಡಲಾಗಿದೆ. ಈ ಮಧ್ಯೆ ಡಿಸಿಎಂ ಡಾ. ಅಶ್ವತ್ಥನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್‌, ಕೆ. ಗೋಪಾಲಯ್ಯ, ಪ್ರಭು ಚವ್ಹಾಣ್‌ ಸೇರಿ ಹಲವರಿಗೆ ಸೋಂಕು. ತಗುಲಿದ್ದು, ಹೋಂ ಐಸೋಲೇಷನ್ ನಲ್ಲಿದ್ದಾರೆ.

ಇನ್ನು ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದ ವಿರುದ್ಧ ಮುಗಿ ಬೀಳಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಒಟ್ಟು ಎಂಟು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ 19 ಸುಗ್ರೀವಾಜ್ಞೆಗಳು ಸೇರಿ ಒಟ್ಟು 31 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಸುಗ್ರೀವಾಜ್ಞೆ (ಎಪಿಎಂಸಿ) ಮತ್ತು ಕರ್ನಾಟಕ ಭೂಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆಗಳ ಬಗ್ಗೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಈ ಮಸೂದೆಗಳ ಮಂಡನೆಯನ್ನು ವಿರೋಧಿಸಿ ಗದ್ದಲ ಎಬ್ಬಿಸುವ ಸಾಧ್ಯತೆ ಇದೆ.Start - session –today-corona-test-member

ಕೋವಿಡ್‌ ನಿರ್ವಹಣೆ, ನೆರೆ ಪ್ರದೇಶಗಳಲ್ಲಿ ಪರಿಹಾರ ವಿತರಣೆ, ಡ್ರಗ್ಸ್‌ ಪ್ರಕರಣ, ಡಿ.ಜೆ.ಹಳ್ಳಿ ಗಲಭೆಯ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆಗಳಿವೆ. ಇತ್ತ ವಿರೋಧ ಪಕ್ಷಗಳನ್ನು ಎದುರಿಸಲು ಬಿಜೆಪಿಯೂ ಸಿದ್ಧತೆ ನಡೆಸಿದ್ದು, ಈ ನಡುವೆ ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಮೂರೇ ದಿನಗಳ ಕಾಲ ನಡೆಸುವ ಬಗ್ಗೆ ಚರ್ಚೆ ನಡೆಸಿದೆ. ಆದರೆ ಕಾಂಗ್ರೆಸ್ ಅಧಿವೇಶನ ಮೊಟಕು ಮಾಡಲು ಬಿಡಲ್ಲ  ಎಂದು ತಿಳಿಸಿದೆ.

Key words: Start – session –today-corona-test-member