ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ.

ಬೆಂಗಳೂರು,ಮೇ,1,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಬಿಜೆಪಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.

ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್​​ ಅವರು ಉಪಸ್ಥಿತರಿದ್ದರು.

ಬಿಜೆಪಿ ಪ್ರಣಾಳಿಕೆ ಬಿಡುಗಡೆ  ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಜನರ ಹಿತದೃಷ್ಠಿಯನ್ನಿಟ್ಟುಕೊಂಡು ಪ್ರಣಾಳಿಕೆ ರೆಡಿ ಮಾಡಿದ್ದೇವೆ.   ದೇಶ ರಾಜ್ಯ  ಗಮನದಲ್ಲಿಟ್ಟುಕೊಂಡು ಆಡಳಿತ ನಿರ್ವಹಣೆ , ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ದಿಕ್ಸೂಚಿಯಾಗಿದೆ. ಸಮಗ್ರ ಅಭಿವೃದ್ದಿ ಗಮನದಲ್ಲಿಟ್ಟುಕೊಂಢು ಪ್ರಣಾಳಿಕೆ ರಚಿಸಿದ್ದೇವೆ ಎಂದರು.

Key words: State –assembly- elections- BJP- manifesto- released.