ದೇಶದ ಮುಂದೆ ರಾಜ್ಯದ ಮಾನ ಹರಾಜು: ಈ ಸರ್ಕಾರವೇ ಹೋಗಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ…

kannada t-shirts

ಬೆಂಗಳೂರು,ಮೇ,4,2021(www.justkannada.in):  ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಈ ಸಮಯದಲ್ಲಿ ನಾವು ಜನರ ಜತೆ ಇರಬೇಕು. ಜನರ ನೋವು, ಕಷ್ಟ ಎಲ್ಲ ವಿಚಾರದಲ್ಲೂ ಅವರಿಗೆ ಧ್ವನಿಯಾಗಿರಬೇಕು. ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.jk

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ  ಡಿಕೆ ಶಿವಕುಮಾರ್, ‘ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ಎಲ್ಲರೂ ಜಾಗೃತರಾಗಿ ಧೈರ್ಯದಿಂದ ಇರಬೇಕು. ಕೆಲವು ಮೃತ ದೇಹಗಳನ್ನು ಯಾರೂ ತೆಗೆದುಕೊಂಡು ಹೋಗದ ಕಾರಣ ಪೊಲೀಸ್ ಅಧಿಕಾರಿಗಳು ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ ಎಂದು ತಿಳಿಯಿತು.  ಜನರ ಆಕ್ರಂದನ ವಿಪರೀತ ಆಗುತ್ತಿದೆ. ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 24 ಮಂದಿ ಸತ್ತಿದ್ದಾರೆ ಎಂದು ಲೆಕ್ಕ ಇದೆ. ಬೇರೆ ಕಡೆಗಳಲ್ಲಿ ಇದೇ ರೀತಿ ಜನ ಸಾಯುತ್ತಿರುವುದನ್ನು ನೋಡುತ್ತಿದ್ದೇವೆ. ಈ ಬಗ್ಗೆ ಜನರೇ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.State- auction- in front – country-government- KPCC President -DK Sivakumar

ಅನೇಕರು ಕೋವಿಡ್ ಆತಂಕದಿಂದ ಸಾಯುತ್ತಿದ್ದಾರೆ. ನಿನ್ನೆ ರಾಜರಾಜೇಶ್ವರಿ ನಗರ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್ ಕೊರತೆ ಇದ್ದಾಗ ಸಂಸದ ಡಿ.ಕೆ. ಸುರೇಶ್ ಅವರು ಮಧ್ಯಪ್ರವೇಶಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ಕಾರಣ, ಆಕ್ಸಿಜನ್ ಪೂರೈಸಲಾಯಿತು.

ನಾವು ಜಾಗೃತರಾಗದಿದ್ದರೆ ಜನರನ್ನು ಕಳೆದುಕೊಳ್ಳಬೇಕಾಗುತ್ತದೆ. ಈಗ ರಾಜಕಾರಣ ಮುಖ್ಯ ಅಲ್ಲ. ಪ್ರತಿಯೊಬ್ಬರನ್ನು ಉಳಿಸಿ, ಆ ಕುಟುಂಬಕ್ಕೆ ಧೈರ್ಯ ತುಂಬಬೇಕು. ಈಗ ಯುವಕರು ಹೆಚ್ಚಾಗಿ ಸಾಯುತ್ತಿರುವುದು ಬಹಳ ಶೋಚನೀಯ. ನಾವು ಈ ಪರಿಸ್ಥಿತಿಯಲ್ಲಿ ಜಾಗೃತರಾಗಿರಬೇಕು. ಆಗ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡೋಣ ಎಂದು ಡಿಕೆಶಿ ಕರೆ ನೀಡಿದರು.

ರಾಜ್ಯ 1750 ಟನ್ ಆಕ್ಸಿಜನ್ ಬೇಡಿಕೆಯನ್ನು ಕೇಂದ್ರದ ಮುಂದಿಟ್ಟಿತ್ತು. ಕೇಂದ್ರ 850 ಟನ್ ಕೊಟ್ಟಿದೆ. ಎಲ್ಲವನ್ನೂ ಕೇಂದ್ರ ಸರ್ಕಾರ ನಿಯಂತ್ರಣ ಮಾಡುತ್ತಿದೆ.  ಆರೋಗ್ಯ ಸಚಿವರ ರಾಜೀನಾಮೆ ಮಾತ್ರವಲ್ಲ, ಈ ಸರ್ಕಾರವೇ ಹೋಗಬೇಕು. 33 ಜನ ಮಂತ್ರಿಗಳು ತಾವು ಉಸ್ತುವಾರಿ ಹೊತ್ತಿರುವ ಜಿಲ್ಲೆಗಳಿಗೆ ಹೋಗಲಿಲ್ಲ ಎಂದರೆ ಹೇಗೆ? ಸಚಿವ ಸುರೇಶ್ ಕುಮಾರ್ ಸತ್ತವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರಾ? ಅವರಿಗೆ ಆಗಲಿಲ್ಲ ಅಂದರೆ ಅಧಿಕಾರ ಬಿಟ್ಟು ಹೋಗಲಿ. ರಾಜ್ಯಪಾಲರ ಆಡಳಿತ ಬಂದ ಮೇಲೆ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಣ ಮಾಡುತ್ತಾರೆ ಎಂದು ಕಿಡಿಕಾರಿದರು.

Key words: State- auction- in front – country-government- KPCC President -DK Sivakumar

website developers in mysore