ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿಯಾದ ರಾಜ್ಯ ಬಿಜೆಪಿ ನಿಯೋಗ….

Promotion

ನವದೆಹಲಿ,ಜು,25,2019(www.justkannada.in):  ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾದ ಹಿನ್ನೆಲೆ ರಾಜ್ಯದಲ್ಲಿ ಸರ್ಕಾರ ರಚಿಸಲು ಸಿದ್ಧತೆ ನಡೆಸಿರುವ ಬಿಜೆಪಿ ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದೆ. ಈ ನಡುವೆ ಇಂದು ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿದೆ.

ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ಇಂದು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಸರ್ಕಾರ ರಚನೆ  ಮಾಡುವ ವಿಚಾರವಾಗಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಹುಮತ ಸಾಭೀತು ಪಡಿಸುವಲ್ಲಿ ವಿಫಲರಾದ ಹಿನ್ನೆಲೆ ಸಿಎಂ ಸ್ಥಾನಕ್ಕೆ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಅಧಿಕಾರ ಗದ್ದುಗೆಗೇರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಗಾಗಿ ಬಿಜೆಪಿ ನಾಯಕುರ ಕಾಯುತ್ತಿದ್ದು, ಇಂದಿನ ಭೇಟಿಯಲ್ಲಿ ಸರ್ಕಾರ ರಚನೆ ಬಗ್ಗೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡಬೇಕು.

Key words: State- BJP- delegation – meet -BJP President- Amit Shah