ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಕಾರ ರಾಜ್ಯದಲ್ಲಿ 32 ಜಿಲ್ಲೆಗಳಿವೆಯಂತೆ….!

ಯಾದಗಿರಿ,ಅ,17,2019(www.justkannada.in):  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರಿಗೆ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬುದು ಗೊತ್ತಿಲ್ವೆ ಎಂಬ ಪ್ರಶ್ನೆ ಎದ್ದಿದೆ. ಹೌದು,   ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ನಳೀನ್ ಕುಮಾರ್ ಹೇಳಿಕೆ ನೀಡಿದ್ದು ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.

ಯಾದಗಿರಿಯಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ರಾಜ್ಯದ 31 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. 32ನೇ ಜಿಲ್ಲೆ ಯಾದಗಿರಿಯಲ್ಲಿ ಇಂದು ಪ್ರವಾಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದಾರೆ.

ಕಾರ್ಯಕರ್ತರ ಭೇಟಿ, ಸಂಘಟನಾ ಪರ್ವ, ಮತಗಟ್ಟೆ ಸಮಿತಿ ರಚನೆ, ಸದಸ್ಯತ್ವ ಅಭಿಯಾನಕ್ಕೆ ವೇಗ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ  ಕಾರಣಕ್ಕೆ ಯಾದಗಿರಿಗೆ ಬಂದಿದ್ದೇನೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿರುವುದು 30 ಜಿಲ್ಲೆಗಳು. ಆದರೆ ಯಾದಗಿರಿಯನ್ನ 32ನೇ ಜಿಲ್ಲೆ ಎಂದು ಹೇಳಿಕೆ ನೀಡುವ ಮೂಲಕ ನಳೀನ್ ಕುಮಾರ್ ಕಟೀಲ್ ಟೀಕೆಗೆ ಗುರಿಯಾಗಿದ್ದಾರೆ,

Key words:  state-BJP President- Nalin Kumar Kateel-  32 districts -yadagiri