ಫೆಬ್ರವರಿ 17ಕ್ಕೆ ರಾಜ್ಯ ಬಜೆಟ್ ಮಂಡನೆ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜನವರಿ,14,2023(www.justkannada.in): ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ ಇದೆ. ಬಜೆಟ್ ಅಧಿವೇಶನದ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಢಿದ ಸಿಎಂ ಬಸವರಾಜ ಬೊಮ್ಮಾಯಿ,  ಜನವರಿ 17 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಬಜೆಟ್ ನಲ್ಲಿ ಜನ ಕಲ್ಯಾಣಕ್ಕೆ  ಹೆಚ್ಚು ಆದ್ಯತೆ ನೀಡಲು ಚಿಂತನೆ ನಡೆಸಲಾಗಿದೆ.  ಜನಪರ ಬಜೆಟ್ ಮಂಢಿಸಲಿದ್ದೇನೆ. ಈ ಬಾರಿ ಯುವಕರು ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡುತ್ತೇನೆ . ರೈತರು ಕಾರ್ಮಿಕರು ಮಹಿಳೆಯರು, ಎಸ್ಸಿ, ಎಸ್ಟಿ ಸಮುದಾಯಕ್ಕೆ ಯೋಜನೆ ಜಾರಿ ಮಾಡುತ್ತೇನೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ ಸಿಎಂ ಬೊಮ್ಮಾಯಿ, ಅವರವರ ಹೇಳಿಕೆ ಅವರ ಸಂಸ್ಕೃತಿಯನ್ನ ತಿಳಿಸುತ್ತೆ ಎಂದರು.

ಇದೇ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧವೂ ಕಿಡಿಕಾರಿದ ಸಿಎಂ ಬೊಮ್ಮಾಯಿ,  ಸಚಿವ ಸಂಫುಟದಲ್ಲಿ ವರದಿ ಬಗ್ಗೆ ಚರ್ಚೆ ಮಾಡುತ್ತೇನೆ. ಕಾಂತರಾಜ ವರದಿ ಮೀಸಲಾತಿ ವಿರೋಧಿಸಿತ್ತು  ಆಗ ಸ್ವಾಮೀಜಿ ಏನು ಮಾಡುತ್ತಿದ್ದರು ಅವರನ್ನೇ ಕೇಳಿ. ಮೀಸಲಾತಿ ವಿಚಾರದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದೇವೆ ನಾನು ಕೊಟ್ಟ ಮತು ಉಳಿಸಿಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Key words:  State- budget- February 17-CM -Basavaraja Bommai.