ಆಗಸ್ಟ್ 9ಕ್ಕೆ ರಾಜ್ಯ ಸಚಿವ ಸಂಪುಟ ರಚನೆ ಫಿಕ್ಸ್…?

ನವದೆಹಲಿ,ಆ,6,2019(www.justkannada.in):  ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ವಾರ ಕಳೆದರೂ ಸಚಿವ ಸಂಪುಟ ವಿಸ್ತರಣೆ ಮಾಡದೆ ವಿಳಂಬವಾಗಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ನಡುವೆ ಸಚಿವ ಸಂಪುಟ ರಚನೆ ಸಂಬಂಧ ಚರ್ಚಿಸಲು ದೆಹಲಿಗೆ ತೆರಳಿರುವ ಸಿಎಂ ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಭೇಟಿ ಮಾಡಲಿದ್ದಾರೆ.

ದೆಹಲಿಯಲ್ಲಿ ಇಂದು ಬಿಜೆಪಿ ಹೈಕಮಾಂಡ್ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚಿಸುತ್ತಿದ್ದು  ಸಚಿವರ ಪಟ್ಟಿಗೆ ಇಂದೇ ಒಪ್ಪಿಗೆ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಬಿಎಸ್ ವೈ ಚರ್ಚೆ ನಡೆಸಲಿದ್ದು, ಸಚಿವ ಸಂಪುಟ ರಚನೆ 9ಕ್ಕೆ ಫಿಕ್ಸ್ ಆಗಲಿದೆ ಎನ್ನಲಾಗುತ್ತಿದೆ.

ಹೈಕಮಾಂಡ್ ಇಂದೇ ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ನೀಡುವ ಕುರಿತು ಬಿಎಸ್  ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದು, ಹಳಬರು, ಹೊಸಬರ ಸಮ್ಮಿಶ್ರಣ ಇರುವ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಶೇ.50ರಷ್ಟು ಯುವ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ  ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, 15 ಶಾಸಕರಿಗೆ ಮೊದಲ ಕಂತಿನಲ್ಲಿ ಸಚಿವ ಸ್ಥಾನ ಸಿಗಲಿದೆ. ಎರಡನೇ ಕಂತಿನಲ್ಲಿ 14 ಅನರ್ಹ ಶಾಸಕರು ಅಥವಾ ಅವರ ಕುಟುಂದವರಿಗೆ  ಸಚಿವ ಸ್ಥಾನ ನೀಡಲು ತೀರ್ಮಾನಿಸಿದ್ದಾರೆ. ಸಚಿವ ಸಂಪುಟ ರಚನೆಯ ಜತೆಗೆ 30  ಪ್ರಮುಖ ನಿಗಮ ಮಂಡಳಿಗೆ ಶಾಸಕರ ನೇಮಕ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಅವರನ್ನ  ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಹಾಗೆಯೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನ ಸಹ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Key words: State- Cabinet- formation- fix – August 9