ಬೈ ಎಲೆಕ್ಷನ್ ನಿಂದ ದೂರ ಉಳಿದ ನಾಯಕರಿಗೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್…

Promotion

ಬೆಂಗಳೂರು,ಡಿ,3,2019(www.justkannada.in):  ರಾಜ್ಯದಲ್ಲಿನ 15 ಕ್ಷೇತ್ರಗಳ ಉಪಚುನಾವಣಾ ಕಣ ರಂಗೇರಿದ್ದು ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಅಂತಿಮ ಹಂತದಲ್ಲಿ ಮೂರು ಪಕ್ಷದ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಬೈ ಎಲೆಕ್ಷನ್ ನಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ನಿನ್ನೆರಾತ್ರಿ ದೇವನಹಳ್ಳಿ ಏರ್ಪೋರ್ಟ್ ನಲ್ಲಿ ರಾಜ್ಯಕಾಂಗ್ರೆಸ್ ಉಸ್ತುವಾರಿ ಕೆ,ಸಿ ವೇಣುಗೋಪಾಲ್ ಸಭೆ ನಡೆಸಿ ಎಐಸಿಸಿ ಚುನಾವಣಾ ವೀಕ್ಷಕರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.  ಉಪಚುನಾವಣೆಯಲ್ಲಿ ದೂರ ಉಳಿದವರ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಡೆಸುವವರ ಬಗ್ಗೆ ಕೆ.ಸಿ ವೇಣುಗೋಪಾಲ್ ಮಾಹಿತಿ ಪಡೆದಿದ್ದಾರೆ.

ಈ ನಡುವೆ ಸಭೆಯಲ್ಲಿ ಚುನಾವಣೆಯಲ್ಲಿ ದೂರ ಉಳಿದವರು ಪರಿಣಾಮ ಎದುರಿಸಬೇಕಾಗುತ್ತದೆ. ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೂ ಕ್ರಮ ಕೈಗೊಳ್ಳಬೇಕಾಗುತ್ತದೆ. ಪಕ್ಷ ವಿರೋಧಿ ಚಟುವಟಿಕೆ ತೊಡಗಿಕೊಂಡರೂ ಅಂತವರ ವಿರುದ್ದವೂ ಕ್ರಮ ಜರುಗಿಸುತ್ತೇವೆ ಎಂದು ಕೆ.ಸಿ ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Key words: State Congress – in charge-KC Venugopal – warned – leaders – bye-election