58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಿದ ರಾಜ್ಯ ಚುನಾವಣಾ ಆಯೋಗ.

ಬೆಂಗಳೂರು,ನವೆಂಬರ್,29,2021(www.justkannada.in):   ಅವಧಿ ಮುಕ್ತಾಯ ಹಿನ್ನೆಲೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗ  ಚುನಾವಣೆ ಘೋಷಣೆ ಮಾಡಿದೆ.

7 ಜಿಲ್ಲೆಗಳ 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ತೆರವಾಗಿರುವ ಸ್ಥಾನಗಳಿಗೂ ಚುನಾವಣೆ ಘೋಷಣೆ ಮಾಡಲಾಗಿದೆ.countdown-grama-panchayath-voting-counting-prepared-mysore-district

ಡಿಸೆಂಬರ್ 27 ರಂದು ಮತದಾನ ನಡೆಯಲಿದ್ದು,  ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು,  ಡಿ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ. 15ಕ್ಕೆ  ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಲಿದೆ.  ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Key words: State Election Commission-announces -election – 58 urban local bodies.