ಸೆ. 6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ : ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ

Promotion

ಬೆಂಗಳೂರು,ಸೆಪ್ಟಂಬರ್,3,2022(www.justkannada.in): ಸೆಪ್ಟೆಂಬರ್ 6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಅಂತೆಯೇ, ಪ್ರಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದ ಜೊತೆಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇದೇ ಸಂದರ್ಭದಲ್ಲಿ 2022 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರು ಪ್ರಕಟಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಅಲ್ಲದೆ, ಈಗಾಗಲೇ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಒಳಗೊಂಡಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.covid-dead-body-cancels-license-order-state-government

ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Key words: State Government –Employees- Day –sep 6th-Award -Ceremony

ENGLISH SUMMARY…

State Govt. Employees day celebration on Sept. 6: Sarvottama Seva Award ceremony
Bengaluru, September 3, 2022 (www.justkannada.in): The State Government Employees’ Day celebration is organized on September 6. This is the first program of this kind organized by the State Government. Thirty government servants who have offered commendable service will be felicitated and would be honored with the ‘State-level Sarvottama Seva Prashasti’ for the year 2022, according to a press statement issued by Srivatsa Krishna, Principal Secretary, Department of Personnel and Administrative Reforms.
Both these programs have been organized by the Department of Personnel and Administrative Reforms, in association with the Karnataka State Government Employees Association. Chief Minister Basavaraj S. Bommai will inaugurate the program and will also give away the awards for the selected best government employees and officers.
State cabinet Ministers, MPs, MLAs, Chief Secretary Vandita Sharma, and other State-level officers, Karnataka State Government Employees Association President Shadakshari will grace the occasion.covid-dead-body-cancels-license-order-state-government
The program has been organized at 11.00 am on September 6, at the Vidhana Soudha Banquet Hall. Half a day holiday has been declared for government employees to attend the program, according to the press release.
Keywords: DPAR/ State Govt. Employees/award