ನಾಳೆ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ: ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ..

ಬೆಂಗಳೂರು,ಫೆಬ್ರವರಿ,28,2023(www.justkannada.in):  7ನೇ ವೇತನ ಆಯೋಗ ಜಾರಿ ಮತ್ತು NPS ರದ್ದುಗೊಳಿಸಿ OPS  ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ (ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದು ಹಲವು ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ.

ನಾಳೆ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್​ ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಆಸ್ಪತ್ರೆಗಳಿಗೂ ಮುಷ್ಕರದ ಬಿಸಿ ತಟ್ಟಲಿದೆ.  ಒಪಿಡಿ ಬಂದ್ ಮಾಡಲು ಆರೋಗ್ಯ ಇಲಾಖೆ ನೌಕರರು ತೀರ್ಮಾನಿಸಿದ್ದು,  ಎಮರ್ಜೆನ್ಸಿ ಸೇವೆ  ಮಾತ್ರ ಲಭ್ಯವಿರಲಿದೆ.  ಏಕಕಾಲದಲ್ಲಿ ಒಪಿಡಿ ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಿದ್ದಾರೆ.

7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ವೇತನ ಆಯೋಗದ ಮಧ್ಯಂತರ ವರದಿಯನ್ನು ಕೇಳಿದ್ದೇನೆ. ಈ ವರದಿ ಸಲ್ಲಿಕೆಯಾದ ಬಳಿಕ  ಅನುಷ್ಟಾನಗೊಳಿಸಲಾಗುತ್ತದೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ. 2023-24ನೇ ಸಾಲಿನಲ್ಲೇ ಅನುಷ್ಟಾನ ಮಾಡುತ್ತೇವೆ ಎಂದು ಈಗಾಗಲೇ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Key words: State government- employees- protest –tomorrow- Variation – many services