ಕೆಲ ನಿರ್ಬಂಧ ವಿಧಿಸಿ ಸಾರ್ವಜನಿಕ ಗಣೇಶೋತ್ಸವ ಪ್ರತಿಷ್ಟಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ …

ಬೆಂಗಳೂರು,ಆ,18,2020(www.justkannada.in):  ಗೌರಿ ಗಣೇಶ ಹಬ್ಬ ಹಿನ್ನೆಲೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ನಿರ್ಬಂಧ ವಿಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ ನಿಯಮಗಳನ್ನ ಸಡಿಲಿಕೆ ಮಾಡಿ ಸಾರ್ವಜನಿಕ ಗಣೇಶ ಪ್ರತಿಷ್ಟಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ.jk-logo-justkannada-logo

ಗಣೇಶೋತ್ಸವ ಆಚರಣೆ, ಸಾರ್ವಜನಿಕವಾಗಿ ಗಣೇಶ ಪ್ರತಿಷ್ಟಾಪನೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನ ಪ್ರಕಟಿಸಿದ್ದು, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮುನ್ನ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅಲ್ಲದೇ ವಾರ್ಡ್‌ ಗೆ ಒಂದು ಗಣಪತಿ ಹಾಗೂ ಗ್ರಾಮಕ್ಕೆ ಒಂದು ಗಣೇಶ ಪ್ರತಿಷ್ಟಾಪಿಸಬಹುದಾಗಿದೆ.  ಅಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಅದಷ್ಟು ಕಡಿಮೆ ಸಂಖ್ಯೆಯಲ್ಲಿ ಜನ ಸೇರಬೇಕು. ಒಮ್ಮೆಲೆ 20 ಕ್ಕಿಂತ ಅಧಿಕ ಮಂದಿ ಸೇರದಂತೆ ಸೂಚಿಸಲಾಗಿದೆ.

ಗಣೇಶೋತ್ಸವಕ್ಕೆ ಮಾರ್ಗಸೂಚಿ ಹೀಗಿದೆ……

ಸಾರ್ವಜನಿಕ ಸ್ಥಳದಲ್ಲಿ 4 ಅಡಿ ಎತ್ತರ ಮೀರದಂತೆ ಮನೆಯಲ್ಲಿ 2 ಅಡಿ ಮೀರದಂತೆ ಗಣೇಶ ಪ್ತತಿಷ್ಟಾಪನೆ.

ಒಂದು ವಾರ್ಡಿಗೆ ಒಂದು ಗಣೇಶಮೂರ್ತಿ ಗ್ರಾಮಕ್ಕೆ ಒಂದು ಮೂರ್ತಿ ಪ್ರತಿಷ್ಠಾಪನೆಗೆ ಪ್ರೋತ್ಸಹಿಸಬೇಕು. ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು.state-government-green-signal-ganesh-festival-public-place

ಗಣೇಶೋತ್ಸವ ಹೆಸರಲ್ಲಿ ಮನೋರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳುವಂತಿಲ್ಲ. ಸಾರ್ವಜನಿಕ ಪ್ರದೇಶದಲ್ಲಿ ಕನಿಷ್ಠ ಜನಸಂಖ್ಯೆ ಇರಬೇಕು.  ಒಮ್ಮೇಲೆ 20 ಜನ ಸೇರದಂತೆ ನೋಡಿಕೊಳ್ಳಬೇಕು. ಗಣೇಶಮೂರ್ತಿ ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ

Key words: State Government-Green signal-ganesh festival- public place