ರಾಜ್ಯ ಸರ್ಕಾರ ಲಾಕ್ ಡೌನ್ ಬಗ್ಗೆ ಆಲೋಚನೆ ಮಾಡಿಲ್ಲ- ಸಚಿವ ಜಗದೀಶ್ ಶೆಟ್ಟರ್…

ಶಿವಮೊಗ್ಗ,ಜು,1,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಲಾಕ್ ಡೌನ್ ನಿರ್ಧಾರ ಕೈಗೊಳ್ಳಬಹುದು ಎಂಬ ಸುದ್ದಿ ಹರಡಿತ್ತು. ಇದೀಗ ಈ ಕುರಿತು ಸ್ಪಷ್ಟನೆ ನೀಡಿರುವ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ರಾಜ್ಯ ಸರ್ಕಾರ ಲಾಕ್ ಡೌನ್ ಬಗ್ಗೆ ಆಲೋಚನೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕೊರೋನಾ ನಿಯಂತ್ರಿಸಲು ಸಿಎಂ ಬಿಎಸ್ ವೈ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಕರಣ ಹೆಚ್ಚಾಗಲು ಬೇರೆ ಬೇರೆ ಕಾರಣ ಇದೆ. ಜನತೆ ಜಾಗೃತಿ ವಹಿಸಿದರೇ ಮಾತ್ರ ಕರೋನಾ ನಿಯಂತ್ರಣಕ್ಕೆ ಬರುತ್ತೆ ಎಂದು ತಿಳಿಸಿದರು.state-government-not-thought-lockdown-minister-jagdish-shettar

ಮಾಸ್ಕ್ ಬಳಕೆ ಇನ್ನು ಮುಂದಿನ ದಿನಗಳಲ್ಲಿ ನಾವು ಬಟ್ಟೆ ತೊಡುವಂತೆ ಸಾಮಾನ್ಯವಾಗಲಿದೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಲಾಕ್ ಡೌನ್ ನನ್ನು ಸಡಿಲಿಕೆ ಮಾಡುತ್ತಲೇ ಬಂದಿದ್ದೇವೆ. ಲಾಕ್ ಡೌನ್ ಇರಲಿ ಬಿಡಲಿ‌ ನಾವು ಸ್ವಯಂ ನಿಯಂತ್ರಣ ಹೇರಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಹಾಕಿಕೊಳ್ಳಬೇಕು ಎಂದು ಜಗದೀಶ್ ಶೆಟ್ಟರ್ ಸಲಹೆ ನೀಡಿದರು.

Key words:  state government – not thought –lockdown-Minister- Jagdish Shettar.