ಸಾರಿಗೆ ಸಿಬ್ಬಂದಿಗೆ ಶಾಕ್! ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Promotion

ಬೆಂಗಳೂರು, ಜೂನ್ 26, 2021 (www.justkannada.in): ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 1ರಿಂದ ಡಿಸೆಂಬರ್ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರ ನಿಷೇಧಿಸಲಾಗಿದೆ.

ಕೆಎಸ್ ಆರ್ ಟಿಸಿ ನೌಕರರ ಮುಷ್ಕರದ ಸುಳಿವು ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.

ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರ ನಿಷೇಧ ಮಾಡಲಾಗಿದೆ.

ಆರ್ಥಿಕತೆಯ ಮೇಲೆ ಕೋವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ನಡೆಸುವುದು ಸೂಕ್ತವಲ್ಲ ಎಂದು ಸರಕಾರ ಹೇಳಿದೆ.