“ರಾಜ್ಯ ಸರ್ಕಾರದ ಮಂತ್ರಿ ಮಂಡಲದಲ್ಲಿ ಹೊಂದಾಣಿಕೆ ಇಲ್ಲ” : ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಟೀಕೆ

Promotion

ಮೈಸೂರು,ಜನವರಿ,31,2021(www.justkannada.in) :  ರಾಜ್ಯ ಸರ್ಕಾರದ ಮಂತ್ರಿ ಮಂಡಲದಲ್ಲಿ ಹೊಂದಾಣಿಕೆ ಇಲ್ಲ. ಇಂತಹ ವಸ್ಟ್ ಸರ್ಕಾರವನ್ನ ನಾನು ನೋಡಿಲ್ಲ. ಯಡಿಯೂರಪ್ಪ ಒಂದೇ ದಿನಕ್ಕೆ ಖಾತೆಯನ್ನ ಚೇಂಚ್ ಮಾಡ್ತಾರೆ. ಆದರಲ್ಲೆ ಗೊತ್ತಾಗುತ್ತೆ ಸರ್ಕಾರ ಯಾವ ಮಟ್ಟಕ್ಕೆ ಇದೇ ಅಂತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಕಿಡಿಕಾರಿದರು.jk

ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಬಗ್ಗೆ ಬಿಜೆಪಿ ಸಚಿವರು, ಶಾಸಕರೇ ಮಾತನಾಡುತ್ತಾರೆ. ಯತ್ನಾಳ್ ವಿರುದ್ಧ ಯಾವುದು ಕ್ರಮ ತೆಗೆದುಕೊಳ್ಳಲಿಲ್ಲ. ವಿಶ್ವನಾಥ್ ಕೂಡಾ ಸರ್ಕಾರದ ವಿರುದ್ಧ  ದಿನ ಮಾತನಾಡ್ತಾರೆ ಎಂದು ಟೀಕಿಸಿದರು.

ದಕ್ಷಿಣ ಭಾರತದಲ್ಲಿ ಯಡಿಯೂರಪ್ಪಗೆ ಗೋಲ್ಡನ್‌ ಟೈಂ ಸಿಕ್ಕಿತ್ತು. ಆದರೆ, ಅವರು ಅದನ್ನ ಸರಿಯಾಗಿ ಬಳಸಿಕೊಳ್ಳಲಿಲ್ಲ.  ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣ ಬಿಜೆಪಿ ಸರ್ಕಾರಕ್ಕೆ ಬೇಕಿಲ್ಲ. ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ  ಪರಿಶಿಷ್ಟ ಜಾತಿ, ಪಂಗಡಕ್ಕೆ ವಿಶೇಷ ಯೋಜನೆ ಜಾರಿಗೆ ತಂದಿದ್ದರು. ಪ್ರತಿವರ್ಷ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಜೆಟ್‌ ನಲ್ಲಿ ಹಣ ಮೀಸಲಿರುತ್ತಿತ್ತು. ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಖರ್ಚು ಮಾಡಿದ್ರು. ಆದರೆ, ಬಿಜೆಪಿ ಸರ್ಕಾರ ಇದನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಇಲಾಖೆಯಲ್ಲಿ ಸರಿಯಾದ ರೀತಿಯಲ್ಲಿ ಹಣ ಖರ್ಚು ಮಾಡಿಲ್ಲ ಎಂದು ಆರೋಪಿಸಿದರು.State-Government-Minister-mandala-No- adjustment-KPCC President-Dhruvanarayan

ಹಿಂದುಳಿದ ವರ್ಗಗಳ ಅಭಿವೃದ್ಧಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ. ಈ ವಿಷಯ ಸದನದಲ್ಲಿಯೂ ಚರ್ಚೆ ಆಗಿದೆ. ಪರಿಶಿಷ್ಟ ವರ್ಗ ಮತ್ತು ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಅವರ ಅಭಿವೃದ್ಧಿಗೆ ಬಳಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ನಿಂದ ರಾಜ್ಯಾದ್ಯಂತ  ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

key words : State-Government-Minister-mandala-No- adjustment-KPCC President-Dhruvanarayan