ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಯಾವುದನ್ನೂ ವಿಧಿಸುವುದಿಲ್ಲ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್

Promotion

ಬೆಂಗಳೂರು,ಏಪ್ರಿಲ್,02,2021(www.justkannada.in) :  ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಸತ್ಯ ಆದರೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಇದೆ. ಹೀಗಾಗಿ, ಲಾಕ್‌ಡೌನ್, ನೈಟ್ ಕರ್ಫ್ಯೂ ಯಾವುದನ್ನೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.

Illegally,Sand,carrying,Truck,Seized,arrest,driver

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಸತ್ಯ. ಆದರೆ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಇದೆ ಎಂದರು.

6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಶಾಲೆಗಳನ್ನು ನಡೆಸದೆ ಇರಲು ಸೂಚನೆ

ಮಹಾರಾಷ್ಟ್ರದಲ್ಲಿ ಇರುವಂತಹ ಪರಿಸ್ಥಿತಿ ರಾಜ್ಯದಲ್ಲಿಲ್ಲ, ಹಾಗಾಗಿ, ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಿಯಂತ್ರಿಸುವ ಅಗತ್ಯವಿಲ್ಲ. ಇನ್ನು ಶಾಲೆಗಳ ಬಗ್ಗೆ ಮಾತನಾಡಿರುವ ಅವರು 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ಭೌತಿಕವಾಗಿ ಶಾಲೆಗಳನ್ನು ನಡೆಸದೆ ಇರಲು ಸೂಚಿಸಲಾಗಿದೆ ಎಂದಿದ್ದಾರೆ.

ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ

ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸ ನಿಯಂತ್ರಿಸಿದ್ದೇವೆ, ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚು ಜನರು ಇರುವ ಕಡೆ ಕೋವಿಡ್ ಲಸಿಕೆಗಳನ್ನು ನೀಡುತ್ತೇವೆ, ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಹಾಸಿಗೆ ಮೀಸಲು

state-Lockdown-Night curfew-Nothing-charged-State-government-Chief Secretary-Ravikumar

ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡುವಂತೆ ಸೂಚಿಸಲು ಸರ್ಕಾರ ತೀರ್ಮಾನಿಸಿದೆ. , ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ಸಿಕ್ಕಿದೆ.

key words : state-Lockdown-Night curfew-Nothing-charged-State-government-Chief Secretary-Ravikumar