ಶಾಂತಿವನದ ಹೇಳಿಕೆಗೆ  ನಾನು ಈಗಲೂ ಬದ್ಧ-ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಬೆಂಗಳೂರು,ನ,5,2019(www.justkannada.in):  ಅಪರೇಷನ್ ಕಮಲ ಕುರಿತು ಸಿಎಂ ಬಿಎಸ್ ವೈ ಆಡಿಯೋ ಲೀಕ್ ವಿಚಾರವನ್ನ ಅಸ್ತ್ರವಾಗಿ ತೆಗೆದುಕೊಂಡ ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಶಾಂತಿವನದಲ್ಲಿ ಮಾತನಾಡಿದ್ದ ವಿಡಿಯೋವನ್ನ ಪ್ರತ್ಯಾಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ.

ಬಿಜೆಪಿಯ ಪ್ರತ್ಯಾಸ್ತ್ರಕ್ಕೆ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.  ಶಾಂತಿವನದಲ್ಲಿ ನೀಡಿದ್ದ ಹೇಳಿಕೆಗೆ ಈಗಲೂ ನಾನು ಬದ್ಧ. ನಮ್ಮ 80 ಜನ ಶಾಸಕರಿದ್ದು ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರಲ್ಲ ಎಂದು ನಮ್ಮ ಕಾರ್ಯಕರ್ತರೊಬ್ಬರು ಕೇಳಿದ್ದರು.  ಚುನಾವಣೆ ಆಗುವವರೆಗೂ ತಾಳ್ಮೆಯಿಂದಿರಿ. ಚುನಾವಣೆಯ ನಂತರ ಕುಳಿತು ಈ ಬಗ್ಗೆ ಮಾತನಾಡೋಣ ಎಂದಿದ್ದೆ. ನಾನು ಸರ್ಕಾರ ಬೀಳಿಸುತ್ತೇನೆ. ಸರ್ಕಾರ ಬೀಳುತ್ತೆ ಎಂದು ಹೇಳಿಲ್ಲ. ಸರ್ಕಾರ ಬೀಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಮತ್ತೊಂದು ಟ್ವಿಟ್ ಮಾಡಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ ಸಿದ್ಧರಾಮಯ್ಯ, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ನಿಂದ ಬೇರೇನು ನಿರೀಕ್ಷಿಸಲು ಸಾಧ್ಯ..? ಇನ್ನಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಬಹುದೆಂಬ ಭಯಕ್ಕೆ ಅವರು ಹಾಗೆ ಮಾತನಾಡಿರಲೂ ಬಹುದು. ಇದು ನಿರೀಕ್ಷಿತ ರಾಜಕೀಯ ಬೆಳವಣಿಗೆ ಎಂದು ಲೇವಡಿ ಮಾಡಿದ್ದಾರೆ.

Key words: statement –shanthivana-Former CM Siddaramaiah -Twitter