ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಪ್ರಕರಣ: ಈವರೆಗೆ 37 ಮಂದಿ ಬಂಧನ- ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಬೆಳಗಾವಿ,ಡಿಸೆಂಬರ್,21,2021(www.justkannada.in):  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 37 ಮಂದಿಯನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ಬೆಳಗಾವಿಯ ಅನಗೋಳದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಎಂಇಎಸ್ ಬ್ಯಾನ್ ಮಾಡುವ ಬಗ್ಗೆ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡುತ್ತೆ.  ಕಿಡಿಗೇಡಿಗಳ ವಿರುದ್ಧ ನಾವು ಕ್ರಮ ಕೈಗೊಂಡಿದ್ದೇವೆ.  ಶಾಂತಿ ಭಂಗ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ.  ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ್ದು ದೇಶದ್ರೋಹದ ಕೆಲಸ ಎಂದರು.

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅಲ್ಲಿನ ಸರ್ಕಾರದ ಜತೆ ಸಂಪರ್ಕದಲ್ಲಿದ್ದೇವೆ.  ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.

Key words: statue – Sangolli Rayanna- Wreck – case -37 arrests – Home Minister- Arag jnanendra