ಷೇರು ಮಾರುಕಟ್ಟೆ ದಿಗ್ಗಜ ಜುಂಜುನ್’ವಾಲಾ ನಿಧನ

Promotion

ಬೆಂಗಳೂರು, ಆಗಸ್ಟ್ 14, 2022 (www.justkannada.in): ಷೇರು ಮಾರುಕಟ್ಟೆ ದಿಗ್ಗಜ, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಇಂದು ಬೆಳಿಗ್ಗೆ ನಿಧನರಾದರು.

62 ವರ್ಷ ವಯಸ್ಸಿನ ರಾಕೇಶ್ ಜುಂಜುನ್‌ವಾಲಾ ಅವರನ್ನು ಬೆಳಗ್ಗೆ 6.45ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.

1960ರಲ್ಲಿ ಹೈದರಾಬಾದ್ ನಲ್ಲಿ ಜನಿಸಿದ ರಾಕೇಶ್ ಜುಂಜುನ್‌ವಾಲಾ, 1985ರಲ್ಲಿ ಶೇರು ಮಾರುಕಟ್ಟೆಗೆ ಕಾಲಿಟ್ಟರು. 5000 ರೂ ನಿಂದ ವಹಿವಾಟು ಆರಂಭಿಸಿದ್ದ ರಾಕೇಶ್ 11 ಸಾವಿರ ಕೋಟಿ ರೂ. ವಹಿವಾಟು ನಡೆಸುವಷ್ಟು ಬೆಳೆದಿದ್ದರು.

ಆಪ್ಟೆಕ್ ಲಿಮಿಟೆಡ್ ಮತ್ತು ಹಂಗಾಮಾ ಡಿಜಿಟಲ್ ಮೀಡಿಯಾ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ ನ ಅಧ್ಯಕ್ಷರಾಗಿದ್ದಾರೆ. ಲಿಮಿಟೆಡ್ ಮತ್ತು ಪ್ರೈಮ್ ಫೋಕಸ್ ಲಿಮಿಟೆಡ್, ಜಿಯೋಜಿತ್ ಫೈನಾನ್ಷಿಯಲ್ ಸರ್ವಿಸಸ್, ಬಿಲ್ಕೇರ್ ಲಿಮಿಟೆಡ್ ಸೇರಿದಂತೆ ಹಲವು ಕಂಪನಿಗಳ ಆಡಳಿತ ಮಂಡಳಿ ನಿರ್ದೇಶಕರಾಗಿದ್ದಾರೆ.