ಈದ್ ಮಿಲಾದ್ ರ್ಯಾಲಿ ವೇಳೆ ಕಲ್ಲು ತೂರಾಟ: ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ.

Promotion

ಶಿವಮೊಗ್ಗ,ಅಕ್ಟೋಬರ್,2,2023(www.justkannada.in): ಮಲೆನಾಡು ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ.

ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು. ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್​ ಜಾರಿ ಮಾಡಲಾಗಿದೆ.

ಈದ್​ ಮಿಲಾದ್​ ಅಂಗವಾಗಿ ಶಿವಮೊಗ್ಗದಲ್ಲಿ ಬೃಹತ್​ ಮಟ್ಟದಲ್ಲಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ರಾಗಿಗುಡ್ಡ ತಲುಪಿದ ವೇಳೆ ಕಟೌಟ್​ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಯಾಗಿದೆ. ಈ ವೇಳೆ ಕೆಲ ವ್ಯಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಸ್ಥಳಕ್ಕೆ ರ್ಯಾಪಿಡ್​ ಆಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Stone –pelting-Eid Milad –rally- Section 144 -enforced – Shimoga city.