ಸೂಪರ್ ಸ್ಟಾರ್ ರಜನೀಕಾಂತ್ ಅವರ ‘ಅಣ್ಣಾತೆ’ ಚಿತ್ರದ ಕಥೆ ಲೀಕ್…?

ಚೆನ್ನೈ,ಆ,6,2020(www.justkannada.in):  ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಬಹುನಿರೀಕ್ಷೆಯ ಅಣ್ಣಾತೆ ಚಿತ್ರದ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾತೆ ಚಿತ್ರದ ಕಥೆ ಹರಿದಾಡುತ್ತಿದೆ. ಸಿನಿಮಾದ ಎಲ್ಲಾ ಪಾತ್ರಗಳ ಹೆಸರು, ಕಥೆ ಹರಿದಾಡುತ್ತಿದೆ. ಹಾಗೇ ಈ ಚಿತ್ರದಲ್ಲಿ ಖುಷ್ಬೂ, ಮೀನಾ, ಕೀರ್ತಿ ಸುರೇಶ್ ನಟಿಸುತ್ತಿದ್ದು, ಅವರ ಪಾತ್ರಗಳು ರಿವಿಲ್ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ.story-of-superstar-rajinikanth-annathe-leak

ರಜನೀಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಚಿತ್ರೀಕರಣ ಪ್ರಾರಂಭವಾಗಿದ್ದು, ಕೊರೊನಾ ಲಾಕ್ ಡೌನ್ ನಿಂದಾಗಿ ಚಿತ್ರೀಕರಣ ಸ್ಥಗಿತಗೊಂಡಿದೆ.