ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೆಡ್ಡು: ನಾಳೆಯಿಂದ ಖಾಸಗಿ ಬಸ್ ಗಳಿಂದ ಸಂಚಾರ ವ್ಯವಸ್ಥೆಗೆ ಸರ್ಕಾರ ನಿರ್ಧಾರ…  

ಬೆಂಗಳೂರು,ಡಿಸೆಂಬರ್,12,2020(www.justkannada.in):  ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮುಂದುವರೆದಿದ್ದು, ಇದೀಗ ಸಾರಿಗೆ ನೌಕರರ ಹೋರಾಟಕ್ಕೆ ಸರ್ಕಾರ ಸೆಡ್ಡು ಹೊಡೆದಿದೆ.logo-justkannada-mysore

ನಾಳೆಯಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಸಂಚಾರ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಬಸ ಸಂಚಾರ ವ್ಯವಸ್ಥೆ ಮಾಡುತ್ತೇವೆ.  ಖಾಸಗಿ ವಾಹನಗಳನ್ನ ಓಡಿಸೋಕೆ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಸರ್ಕಾರಿ ದರದಲ್ಲಿ  ಖಾಸಗಿ ವಾಹನಗಳು ಸಂಚರಿಸಲಿವೆ ಎಂದು ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.strike-transport-workers-government-decide-private-buses-dcm-lakshman-savadi

ನಾನು ಈಗಲೂ ಮನವಿ ಮಾಡುತ್ತೇನೆ. ನಾಳೆ ಮಧ್ಯರಾತ್ರಿ 12 ಗಂಟೆವರೆಗೂ ಕಾಯುತ್ತಿರುತ್ತೇನೆ.  ನೀವು ಮೊದಲು ಧರಣಿ ಕೈಬಿಟ್ಟು ಮಾತುಕತೆಗೆ ಬನ್ನಿ. ಈಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ನಡೆಸುವಂತೆ ತಿಳಿಸಿದ್ದಾರೆ. ಈಗಾಗಿ ಧರಣಿ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿದ್ದಾರೆ.

Key words: strike -transport workers-Government -decide – private buses-dcm –lakshman savadi