ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ ಪರಿಹಾರವಿಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು,ಡಿಸೆಂಬರ್,20,2020(www.justkannada.in)  : ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆ. ಹೀಗಿದ್ದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.Teachers,solve,problems,Government,bound,Minister,R.Ashokಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ ಎಂದು ಹೇಳಿದ್ದಾರೆ.

ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು.strike-workers-2 Months-No Solution-Former CM-H.D.Kumaraswamy-Bored

ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ ಎಂದು ಟ್ವಿಟರ್ ನಲ್ಲಿ ಸಲಹೆ ನೀಡಿದ್ದಾರೆ.

key words : strike-workers-2 Months-No Solution-Former CM-H.D.Kumaraswamy-Bored