ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಮತ್ತಷ್ಟು ಕಠಿಣ ಕ್ರಮ:  ಜು.7ರವರೆಗೆ ಕಾದು ನೋಡಿ ಎಂದ ಸಚಿವ ಆರ್.ಅಶೋಕ್…

ಬೆಂಗಳೂರು,ಜೂ,29,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ರಾಜ್ಯದಲ್ಲಿ ಮತ್ತಷ್ಠು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಜುಲೈ 7ರವರೆಗೆ ಕಾದು ನೋಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕೊರೋನಾ ನಿಯಂತ್ರಣ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಆರ್.ಅಶೋಕ್, ಜುಲೈ ಆಗಸ್ಟ್ ತಿಂಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇದೆ.  ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇನ್ನು ಆರು ತಿಂಗಳ ಕಾಲ ವೈದ್ಯರು ಇದೇ ರೀತಿ ಕೆಲಸ ಮಾಡಲು ಸಿದ್ಧರಿರಬೇಕು. ಆಸ್ಪತ್ರೆಗಳಲ್ಲಿ ಕೆಲಸ ಮಾಡುವವರು ಭಯಭೀತರಾಗಿದ್ದಾರೆ. ಹೀಗಾಗಿ ಪಿಪಿಇ ಕಿಟ್ ಬಳಸುವ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.stringent –action- after -SSLC examination-minister- R. Ashok.

ಆಸ್ಪತ್ರೆಗಳಲ್ಲಿ ಪೌಷ್ಠಿಕ ಆಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.  ಕೋವಿಡ್ ಕೇರ್ ಆಸ್ಪತ್ರೆಗಳಿಗೆ ತಹಶೀಲ್ದಾರ್ ಗಳನ್ನ ನೇಮಕ ಮಾಡುತ್ತೇವೆ. ಪಾರ್ಕ್ ಗಳಲ್ಲಿ ವಾಕಿಂಗ್ ಮಾಡಿದ ಬಳಿಕ ಗುಂಪಾಗಿ ಸೇರುತ್ತಾರೆ. ಇದರಿಂದ ಕೊರೊನಾ ಹರಡುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನ ಪಾರ್ಕ್ ಗಳ ಬಂದ್ ಕುರಿತು ಇಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

Key words: stringent –action- after -SSLC examination-minister- R. Ashok.