ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ.

Promotion

ಬೆಂಗಳೂರು,ಸೆಪ್ಟಂಬರ್,17,2021(www.justkannada.in): ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

17 ವರ್ಷದ ರಾಹುಲ್ ಭಂಡಾರಿ  ಮೃತ ವಿದ್ಯಾರ್ಥಿ. ಸಂಜಯನಗರ ಮುಖ್ಯರಸ್ತೆಯ ಬಸ್‌ ಸ್ಟಾಪ್‌ ಬಳಿ  ರಾಹುಲ್ ಭಂಡಾರಿಯ ಶವ ಸಿಕ್ಕಿದೆ.  ರಾಹುಲ್ ಭಂಡಾರಿ ಬೆಂಗಳೂರಿನ ಆರ್.ಟಿ.ನಗರದ ನಿವಾಸಿಯಾಗಿದ್ದು,  ಆರ್ಮಿ ಶಾಲೆಯಲ್ಲಿ  ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದನು. ರಾಹುಲ್ ಭಂಡಾರಿ ಪಿಸ್ತೂಲ್ ನಿಂದ ತಲೆಗೆ ಶೂಟ್ ಮಾಡಿಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಮೃತದೇಹದ ಪಕ್ಕೆ ಗನ್ ಹಾಗೂ ಬುಲೆಟ್ ಗಳು ಪತ್ತೆಯಾಗಿದ್ದು ಮೃತದೇಹವನ್ನ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ರಾಹುಲ್ ಭಂಡಾರಿ ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ. ತಂದೆ ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ರಾಹುಲ್ ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ತಿದ್ದ. ಮಾನಸಿಕ ಒತ್ತಡ ಹೆಚ್ಚಾದಾಗ ಎದ್ದು ವಾಕ್ ಮಾಡ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದು ವಾಕಿಂಗ್ ಗೆ ತೆರಳಿದ್ದಾನೆ ಬಳಿಕ ಬೆಳಗ್ಗೆ ನಿದ್ದೆಯಿಂದ ಎದ್ದ ಪೋಷಕರು ಮಗ ರೂಮ್ ನಲ್ಲಿ ಕಾಣಿಸದ ಹಿನ್ನೆಲೆ ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ ರಾಹುಲ್ ಕರೆ ಸ್ವೀಕರಿಸಿಲ್ಲ.

ರಾಹುಲ್ ಮುಂಜಾನೆ ಐದು ಗಂಟೆ ಸುಮಾರಿಗೆ ಶೂಟ್ ಮಾಡಿಕೊಂಡು‌ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತ ಪಟ್ಟ ಬಳಿಕವೂ ಪೋಷಕರಿಂದ ನಿರಂತರವಾಗಿ ಕರೆ ಬರುತ್ತಿತ್ತು. ಬಳಿಕ ಸ್ಥಳದಲ್ಲಿದ್ದ ಪೊಲೀಸರು ಫೋನ್ ತೆಗೆದು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

Key words: Student –commit-suicide –firing- himself-bangalore