ನಾಳೆ ಪೈಲ್ವಾನ್ ಆಡಿಯೋ ಬಿಡುಗಡೆ: ಒಂದೇ ವೇದಿಕೆಯಲ್ಲಿ ಪವರ್ ಸ್ಟಾರ್ -ಕಿಚ್ಚ

ಬೆಂಗಳೂರು, ಆಗಸ್ಟ್ 08, 2019 (www.justkannada.in): ನಾಳೆ ಕಿಚ್ಚ ಸುದೀಪ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಾಳೆ ಚಿತ್ರದುರ್ಗದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಇವರೊಂದಿಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ , ಲಹರಿ ವೇಲು ವೇದಿಕೆಯಲ್ಲಿ ಇರಲಿದ್ದಾರೆ. ಅರ್ಜುನ್ ಜಸ್ಯ ಆರು ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ.