ಸಕ್ಕರೆ ಕಾರ್ಖಾನೆ ಮಾಲೀಕರು ಸಂಪುಟ ಸೇರ್ಪಡೆ ಬೇಡ: ರಾಜ್ಯಪಾಲರಿಗೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮನವಿ.

ಬೆಂಗಳೂರು,ಮೇ,16,2023(www.justkannada.in): ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ  ಎಂದು  ಹೊಸ ಸರ್ಕಾರಕ್ಕೆ ಸೂಚನೆ ಕೊಡಿ ಎಂದು ರಾಜ್ಯಪಾಲ ಥಾವರ್ ಚಂದ್  ಗೆಹ್ಲೋಟ್ ಅವರಿಗೆ ರೈತ ಮುಖಂಡರು ಮನವಿ ಮಾಡಿದರು.

ಇಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ರೈತ ಮುಖಂಡರು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

ಸಕ್ಕರೆ ಕಾರ್ಖಾನೆ ಮಾಲೀಕರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬೇಡ. ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು. ರಸಗೊಬ್ಬರಗಳ ಬೆಲೆ ಇಳಿಕೆ ಮಾಡಬೇಕು. ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೊರ್ ಕೇಳುವುದು ಬೇಡ. ಹಾಗೆಯೇ ಎಪಿಎಂಸಿ ಕಾಯ್ದೆಯನ್ನು  ರದ್ದು ಮಾಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಸೇರಿದಂತೆ ಅನೇಕ  ಬೇಡಿಕೆಗಳನ್ನ ಈಡೇರಿಸಲು ಸೂಚಿಸುವಂತೆ ರಾಜ್ಯಪಾಲರಿಗೆ ರೈತ ಮುಖಂಡರು ಒತ್ತಾಯಿಸಿದರು.

ಇದೇ ವೇಳೆ ಕೃಷಿ ಚಟುವಟಿಕೆ ಬಗ್ಗೆ ರಾಜ್ಯಪಾಲರು ತಿಳಿದುಕೊಂಡರು.  ನಂತರ ರೈತ ಮುಖಂಡರ ಎಲ್ಲ ಒತ್ತಾಯಗಳ ಬಗ್ಗೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭರವಸೆ ನೀಡಿದರು.

ಮನವಿ ಪತ್ರ ನೀಡಿ  ವಿವರವಾಗಿ ಸಮಸ್ಯೆ ತಿಳಿಸಿದ ಕುರುಬೂರು ಶಾಂತಕುಮಾರ್, ರಾಜ್ಯದಲ್ಲಿರುವ 78 ಸಕ್ಕರೆ ಕಾರ್ಖಾನೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳ ಶಾಸಕರು ಮಾಲೀಕರು ಇರುವ ಕಾರಣ ಯಾವುದೇ ಸರ್ಕಾರ ಬಂದರೂ ಸಚಿವ ಸಂಪುಟದಲ್ಲಿ ಸೇರುವುದರಿಂದ 30 ಲಕ್ಷ ಕಬ್ಬು ಬೆಳೆಗಾರರ ರೈತರಿಗೆ ಸಂಕಷ್ಟ ಅನುಭವಿಸುವಂತಾಗಿದೆ. ಹಿಂದಿನ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರವನ್ನು150 ರೂ.  ಏರಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ಉಚ್ಚ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದು ಹೆಚ್ಚುವರಿ ಹಣ ಪಾವತಿಸದೆ ರೈತರನ್ನ ಸಂಕಷ್ಟಕ್ಕೆ ತಳಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಕಬ್ಬಿನ ದರವನ್ನ 3800 ರಿಂದ 4500 ತನಕ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಹೆಚ್ಚುವರಿ ಬೆಲೆ ನಿಗದಿ ಮಾಡಿದೆ ಹಿಂದಿನ ಎಲ್ಲ ವರ್ಷಗಳಲ್ಲೂ ಇದೇ ರೀತಿ ಚಟುವಟಿಕೆ ನಡೆಸುತ್ತಿದ್ದಾರೆ. ಬಹಳಷ್ಟು ಸಾರಿ ಸಕ್ಕರೆ  ಕಾರ್ಖಾನೆ ಮಾಲೀಕರು ಸಚಿವರಾಗಿರುವ ಕಾರಣ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ ಸಕ್ಕರೆ ಅಭಿವೃದ್ಧಿ ಆಯುಕ್ತರು ಕೂಡ ಪದೇ ಪದೇ ಬದಲಾಗುತ್ತಿರುವುದರಿಂದ ಯಾವುದೇ ಕಾನೂನು ಆದೇಶಗಳನ್ನು ಸಮರ್ಪಕ ಜಾರಿ ಮಾಡುವಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಬೇಸರ ಹೊರಹಾಕಿದರು.

ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು.  ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು.  ಈ ಬಗ್ಗೆ ನೂತನ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

Key words: Sugar- factory -owners – not – join -cabinet – Kuruburu Shanthakumar – governor.