ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ  ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ….

Promotion

ಚಾಮರಾಜನಗರ,ಆ,5,2019(www.justkannada.in): ಸುಳ್ವಾಡಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ  ಜಾಮೀನು ಅರ್ಜಿ ವಿಚಾರಣೆ ಮತ್ತೆ  ಮುಂದೂಡಿಕೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 19 ರವರೆಗೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಸವರಾಜ್ ಮುಂದೂಡಿಕೆ ಮಾಡಿದ್ದಾರೆ. ಇದರಿಂದಾಗಿ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ, ದೊಡ್ಡಯ್ಯ ಮತ್ತೆ ಜೈಲುಪಾಲಾಗಿದ್ದಾರೆ.

ಜಾಮೀನು ಅರ್ಜಿ ವಿಚಾರಣೆಯನ್ನ ಆಗಸ್ಟ್ 19 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಭಕ್ತರ ಪ್ರಸಾದಕ್ಕೆ ವಿಷವಿಕ್ಕಿದ ಆರೋಪದಲ್ಲಿ ವಿಚಾರಣಾಧೀನ ಖೈದಿಗಳಾಗಿ ಆರೋಪಿಗಳು ಎಂಟು ತಿಂಗಳಿಂದ ಜೈಲಿನಲ್ಲಿದ್ದಾರೆ.

Key words: Sulwadi –poisoning- case-postponing – bail -application -accused.