ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲುವವರೆಗೆ ಹೋರಾಟ ನಿಲ್ಲಲ್ಲ ಎಂದ ಸುಮಲತಾ ಅಂಬರೀಶ್

Promotion

ಬೆಂಗಳೂರು, ಜುಲೈ 11, 2021 (www.justkannada.in): ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಹೋರಾಟದತ್ತ ನನ್ನ ಗಮನ ಇರುತ್ತದಷ್ಟೇ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ನಿಲ್ಲುವವರೆಗೆ ನನ್ನ ಹೋರಾಟ ನಿಲ್ಲುವುದಿಲ್ಲ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವ ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಕಷ್ಟ ಅಂತ ನನಗೂ ಗೊತ್ತು. ಸಂಸತ್ ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.

ನಾನು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ. ಅಂಬರೀಶ್ ಅವರ ಲಕ್ಷಾಂತರ ಅಭಿಮಾನಿಗಳಿಗೂ ನೋವಾಗಿದೆ. ಆದರೆ ನಾವು ಅವರ ದಾರಿಯಲ್ಲಿ ಹೋಗುವುದು ಬೇಡ ಅಂತ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.