ಸಮನ್ಸ್ ನೀಡಿದ ಹಿನ್ನೆಲೆ: ಇಡಿ ಕಚೇರಿಗೆ ಹಾಜರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್…

Promotion

ನವದೆಹಲಿ,ಸೆ,19,2019(www.justkannada.in):  ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಸಂಬಂಧ  ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದೀಗ ನವದೆಹಲಿಯ ಲೋಕನಾಯಕ ಭವನದಲ್ಲಿರುವ ಇಡಿ ಕಚೇರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದಾಖಲೆ ಸಮೇತ ಆಗಮಿಸಿದ್ದಾರೆ.

ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಜತೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದು ವಿಚಾರಣೆಗೆ ಹಾಜರಾಗಲಿದ್ದಾರೆ.

Key words: summons-congress MLA-Laxmi Hebbalkar- attending – ED office.