ಕಮಲ ಪಕ್ಷದತ್ತ ರಜನಿ ಸೆಳೆಯಲು ತಂತ್ರ !? ರಾಜ್ಯಪಾಲರಾಗಲಿದ್ದಾರಾ ತಲೈವಾ?

Promotion

ಬೆಂಗಳೂರು, ಆಗಸ್ಟ್ 19, 2022 (www.justkannada.in): ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಅವರ ಕ್ರೇಜ್ ಅನ್ನು ರಾಜಕೀಯವಾಗಿ ಬಳಸಿಕೊಳ್ಳಲು ಈಗಾಗಲೇ ಸಾಕಷ್ಟು ಪ್ರಯತ್ನ ನಡೆಸಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ರಜನಿಕಾಂತ್ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡುವ ಮೂಲಕ ಬಿಜೆಪಿ ತಮಿಳುನಾಡಿನ ಜನರ ಮನಗೆಲ್ಲುವ ಚಿಂತನೆಯಲ್ಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಇದೇ ಈ ಎಲ್ಲ ಅನಿಮಾನಗಳಿಗೆ ಪ್ರಮುಖ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ವೇಳೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರ ಜೊತೆ ರಜನಿಕಾಂತ್‌ ಮಾತುಕತೆ ನಡೆಸಿದರು. ಬಳಿಕ ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳೇ ಇಂತಹದೊಂದು ಚರ್ಚೆಗೆ ಮುನ್ನುಡಿ ಬರೆದಿದೆ.