ನಾಳೆಯಿಂದಲೇ ರಾಜ್ಯದ ಮಠಗಳಿಗೆ ಅಕ್ಕಿ, ಗೋಧಿ  ಪೂರೈಕೆಗೆ ಕ್ರಮ- ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…

Promotion

ಬೆಂಗಳೂರು,ಫೆ,4,2020(www.justkannada.in): ದಾಸೋಹ ಯೋಜನೆಯಡಿ ಮಠಗಳಿಗೆ ಪೂರೈಕೆ ಮಾಡಲಾಗುತ್ತಿದ್ದ ಅಕ್ಕಿ ಗೋಧಿ ಸ್ಥಗಿತಗೊಳಿಸಿರುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ದಾಸೋಹ ಯೋಜನೆಯಡಿ ಮಠಗಳಿಗೆ ನೀಡಲಾಗುತ್ತಿದ್ದ ಅಕ್ಕಿ ಮತ್ತು ಗೋಧಿ ಪೂರೈಕೆಯನ್ನ ಮುಂದುವರೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ದಾಸೋಹ ಯೋಜನೆ ಸ್ಥಗಿತ ವಿಚಾರ ಕುರಿತು ಸಭೆಯಲ್ಲಿ ಆಹಾರ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದರು.

ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದ ಮಠಗಳಿಗೆ ನಾಳೆಯಿಂದಲೇ ಅಕ್ಕಿ, ಗೋಧಿ ಪೂರೈಕೆ ಮಾಡಲಾಗುತ್ತದೆ.  ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಸರ್ಕಾರಕ್ಕೆ ಎಷ್ಟೇ ಹೊರೆಯಾದರೂ ನಾಳೆಯಿಂದಲೇ ಅಕ್ಕಿ, ಗೋಧಿ ಪೂರೈಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ದಾಸೋಹ ಯೋಜನೆಗೆ 18 ಕೋಟಿ ಅನುದಾನ ಮೀಸಲಿಡಲಾಗುತ್ತದೆ. ಜಿಲ್ಲಾ ಕೇಂದ್ರಗಳ ಜಿಲ್ಲಾಸ್ಪತ್ರೆಗಳಿಗೆ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಅಗತ್ಯವಿರುವ ಜಿಲ್ಲಾಸ್ಪತ್ರೆಗಳ 120 ಆ್ಯಂಬುಲೆನ್ಸ್ ಗಳಿಗೆ ಅನುದಾನ ನೀಡಲಾಗುತ್ತದೆ. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳಲ್ಲಿ ಹಾಸ್ಟೆಲ್. ಬಾಲಕೀಯರ ವಸತಿ ನಿಲಯಗಳಿಗೆ 223 ಕೋಟಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಹಾಗೆಯೇ ಶಿವಮೊಗ್ಗ ಏರ್ ಪೋರ್ಟ್ ಕಾಮಗಾರಿಗೆ 220 ಕೋಟಿ ರಿಲೀಸ್ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.

Key words: supply- rice – wheat –math- tomorrow- Decision – Cabinet Meeting.