ಕಾರ್ಮಿಕರ ಮುಷ್ಕರ ಬೆಂಬಲಿಸಿ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ….

Promotion

ಬೆಂಗಳೂರು,ಜ,8,2020(www.justkannada.in): ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ನಡೆಸುತ್ತಿರುವ ಮುಷ್ಕರಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಮುಷ್ಕರಕ್ಕೆ ಬೆಂಬಲಿಸಿ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನ ಮೆಜೆಸ್ಟಿಕ್ ಬಳಿ ಕಪ್ಪುಬಟ್ಟೆ ಪ್ರದರ್ಶಿಸಿ ಕೇಂದ್ರದ ವಿರುದ್ದ ಧರಣಿ ನಡೆಸಿ  ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.  ಈ ವೇಳೆ ಪೊಲೀಸರು ವಾಟಾಳ್ ನಾಗರಾಜುರನ್ನ  ವಶಕ್ಕೆ ಪಡೆದರು.

ನಗರದ ಪೀಣ್ಯಾದ 2ನೇ ಹಂತದಿಂದ ಜಾಲಹಳ್ಳಿ ಕ್ರಾಸ್ ವರೆಗೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನಾ ರ್ಯಾಲಿ ನಡೆಸಿದವು. ಜಾಲಹಳ್ಳಿ ಕ್ರಾಸ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾರ್ಯಾಲಿ ತಡೆದ ಹಿನ್ನೆಲೆ ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Key words: support –labor- strike- Vatal Nagaraj –protest-police